ಇತರೆ

ವಿದೇಶಿ ಮಹಿಳೆ ಸೇರಿ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ:ಮತ್ತೋರ್ವ ಆರೋಪಿ ಅರೆಸ್ಟ್

Views: 96

ಕನ್ನಡ ಕರಾವಳಿ ಸುದ್ದಿ: ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಪ್ರವಾಸಿಗರ ಮೇಲೆ ಹಲ್ಲೆಗೈದು, ಇಬ್ಬರು ಮಹಿಳೆಯರ ಮೇಲೆ ಗ್ಯಾಂಗ್ ರೇಪ್ ಎಸಗಿ ಪರಾರಿಯಾಗಿದ್ದ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇಂದು ತಮಿಳುನಾಡಿನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಸಾಯಿರಾಮ್ ಬಂಧಿತ ಆರೋಪಿ. ನಿನ್ನೆಯಷ್ಟೇ ಪೊಲೀಸರು ಮಲ್ಲೇಶ್, ಚೇತನ್ ಸಾಯಿ ಎಂಬಾತನನ್ನು ಬಂಧಿಸಿ, ತನಿಖೆಯ ಮುಂದುವರಿದ ಭಾಗವಾಗಿ ಘಟನಾ ಸ್ಥಳಕ್ಕೆ ಇಂದು ಪೊಲೀಸರು ಆರೋಪಿಗಳನ್ನು ಕರೆದೊಯ್ದು ಮಹಜರು ನಡೆಸಿದರು. ಇಂದು ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿ ಸಾಯಿರಾಮ್ ನನ್ನು ಬಂಧಿಸಿದ್ದಾರೆ. ಕೊಪ್ಪಳದ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರೆದಿದೆ.

 

Related Articles

Back to top button