ಶಿಕ್ಷಣ

ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶ್ರೀಹರಿ ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ 

Views: 2

ಕನ್ನಡ ಕರಾವಳಿ ಸುದ್ದಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕುಂದಾಪುರ ಇದರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ವೆ ಇಲ್ಲಿ ಜರುಗಿದ 14 ವರ್ಷ ವಯೋಮಾನದೊಳಗಿನ ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ, ಇಲ್ಲಿನ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಶ್ರೀಹರಿ ಅಪೂರ್ವ ಪ್ರತಿಭೆ ಪ್ರದರ್ಶಿಸಿ ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾನೆ.

ವಿದ್ಯಾರ್ಥಿಯ ಈ ಸಾಧನೆಗೆ ಸುಜ್ಞಾನ ಎಜುಕೇಶನಲ್‌ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್‌ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್‌ ಚಂದ್ರ ಶೆಟ್ಟಿ, ಖಜಾಂಚಿ ಭರತ್‌ ಶೆಟ್ಟಿ ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್‌ ಕುಮಾರ್‌ ಅವರು ಅಭಿನಂದಿಸಿದ್ದಾರೆ.

ವಿದ್ಯಾರ್ಥಿಗೆ ಶಾಲೆಯ ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರು ಮಾರ್ಗದರ್ಶನ ನೀಡಿದ್ದರು.

Related Articles

Back to top button
error: Content is protected !!