ಶಿಕ್ಷಣ
ವಿದ್ಯಾರ್ಥಿಗಳಿಂದ ಟಾಯ್ಲೆಟ್ ಗುಂಡಿ ಕ್ಲೀನ್ ಮಾಡಿಸಿದ್ರು ಮೊರಾರ್ಜಿ ಶಾಲೆಯಲ್ಲಿ:ನಾಲ್ವರು ಅಮಾನತು

Views: 0
ಕೋಲಾರ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳ ಕೈಯಲ್ಲಿ ಶೌಚಾಲಯದ ಗುಂಡಿ ಕ್ಲೀನ್ ಮಾಡಿಸಿರೋ ಆರೋಪ ಕೇಳಿ ಬಂದಿದೆ. ಮಾಲೂರು ತಾಲ್ಲೂಕು ಯಲವಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಕೃತ್ಯ ನಡೆದಿದೆ. ಈ ಸಂಬಂಧ ನಾಲ್ವರು ಅಧಿಕಾರಿಗಳನ್ನು ಸಮಾಜ ಕಲ್ಯಾಣ ಸಚಿವ ಹೆಚ್.ಸಿ ಮಹಾದೇವಪ್ಪ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಶಾಲಾ ಮುಖ್ಯ ಶಿಕ್ಷಕರ ಎದುರಲ್ಲೇ ಶಿಕ್ಷಕರು ಮಕ್ಕಳಿಂದ ಶೌಚಾಲಯದ ಗುಂಡಿಯನ್ನು ಸ್ವಚ್ಛ ಮಾಡಿಸಿದ್ದಾರೆ. ಮಾತ್ರವಲ್ಲದೇ ಕೆಲ ದಿನಗಳಿಂದ ಪ್ರಾಂಶುಪಾಲೆ ಭರತಮ್ಮ, ಶಿಕ್ಷಕ ಅಭಿಷೇಕ್ ಹಾಗೂ ವಾರ್ಡನ್ ಮಂಜುನಾಥ್ ಸೇರಿ ಕೆಲವು ಶಿಕ್ಷಕರಿಂದ ಮಕ್ಕಳಿಗೆ ಬೇರೆ ಬೇರೆ ರೀತಿ ಕಿರುಕುಳ ನೀಡಿದ್ದರೆಂದು ಆರೋಪಿಸಲಾಗಿದೆ.
ಸದ್ಯ ಮಕ್ಕಳಿಗೆ ಕಿರುಕುಳ ನೀಡಿರುವ ಶಿಕ್ಷಕರ ವಿರುದ್ಧ ಕ್ರಮಕ್ಕೆ ಪೋಷಕರು ಆಗ್ರಹಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.