ಇತರೆ
ವಿದ್ಯಾರ್ಥಿಗಳಿಗೆ ವಿದಾಯ ಹೇಳಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕಿ
Views: 78
ಕನ್ನಡ ಕರಾವಳಿ ಸುದ್ದಿ: ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ರೋಹಿಣಿ (51) ಆತ್ಮಹತ್ಯೆಗೆ ಶರಣಾದ ಶಿಕ್ಷಕಿ. ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿದ್ದ ಕೋವಿಯಿಂದ ಗುಂಡು ಹೊಡೆದುಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.






