ಇತರೆ

ವಿದ್ಯಾರ್ಥಿಗಳು, ಐಟಿ-ಬಿಟಿ ಉದ್ಯೋಗಿಗಳಿಗೆ ಡ್ರಗ್ಸ್ ಮಾರಾಟದ ಜೋಡಿ ಸೆರೆ, ಕೋಟ್ಯಾಂತರ ರೂ. ಮೌಲ್ಯದ 5.72 ಕೆ.ಜಿ. ಎಂಡಿಎಂಎ ವಶ

Views: 12

ಕನ್ನಡ ಕರಾವಳಿ ಸುದ್ದಿ: ದೆಹಲಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಕೋಟ್ಯಾಂತರ ರೂ. ಮೌಲ್ಯದ ಮಾದಕವಸ್ತುಗಳನ್ನು ವ್ಯಾನಿಟಿ ಬ್ಯಾಗ್‌ನಲ್ಲಿ ತಂದು, ಕಾಲೇಜು ವಿದ್ಯಾರ್ಥಿಗಳು ಹಾಗೂ ಐಟಿ-ಬಿಟಿ ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದ ಖತರ್ನಾಕ್ ಜೋಡಿಯನ್ನು ಯಲಹಂಕ ಉಪನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಬರೋಬ್ಬರಿ 11.44 ಕೋಟಿ ರು.ಮೌಲ್ಯದ 5.72 ಕೆ.ಜಿ ನಿಷೇಧಿತ ಎಂಡಿಎಂಎ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಗಂಗೊಂಡನಹಳ್ಳಿಯ ಇಮ್ರಾನ್ ಪಾಷಾ (28) ಹಾಗೂ ಹೊಸಕೋಟೆಯ ಆಯಿಷಾ ಸಿದ್ದಿಕಿ (27) ಬಂಧಿತ ಆರೋಪಿಗಳಾಗಿದ್ದಾರೆ.

ಕೆಂಚೇನಹಳ್ಳಿಯಿಂದ ಹಾರೋಹಳ್ಳಿಗೆ ಹೋಗುವ ರಸ್ತೆಯ ಮಧ್ಯದಲ್ಲಿರುವ ಖಾಲಿ ಲೇಔಟ್ ಕಚ್ಚಾ ರಸ್ತೆಯ ಬದಿಯಲ್ಲಿ ಆರೋಪಿಗಳು ಮಾದಕವಸ್ತುಗಳನ್ನು ಇತರ ಪೆಡ್ಲರ್‌ಗಳಿಗೆ ಹಂಚಿಕೆ ಮಾಡಲು ಕಾಯುತ್ತಿದ್ದರು.

ಈ ಕುರಿತು ಖಚಿತ ಮಾಹಿತಿ ಪಡೆದ ಯಲಹಂಕ ಉಪನಗರ ಪೊಲೀಸರು ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.

ವ್ಯಾನಿಟಿ ಬ್ಯಾಗ್‌ನಲ್ಲಿ ಡ್ರಗ್ಸ್ ಸ್ಮಗ್ಲಿಂಗ್:

ಆರೋಪಿಗಳು ಹೊಸದಿಲ್ಲಿಯಿಂದ ಬೆಂಗಳೂರಿಗೆ ವಿಮಾನದಲ್ಲೇ ಪ್ರಯಾಣಿಸುತ್ತಿದ್ದರು. ವಿಮಾನ ನಿಲ್ದಾಣದ ತಪಾಸಣೆಯಲ್ಲಿ ಯಾರಿಗೂ ಅನುಮಾನ ಬಾರದಿರಲಿ ಎಂಬ ಕಾರಣಕ್ಕೆ, ಮಹಿಳೆಯ ವ್ಯಾನಿಟಿ ಬ್ಯಾಗ್‌ನಲ್ಲಿ ಕೆ.ಜಿ ಗಟ್ಟಲೆ ಡ್ರಗ್ಸ್  ಬೆಂಗಳೂರಿಗೆ ತರುತ್ತಿದ್ದರು. ಬಳಿಕ ನಗರದ ವಿದ್ಯಾರ್ಥಿಗಳು, ಐಟಿ-ಬಿಟಿ ಉದ್ಯೋಗಿಗಳು ಹಾಗೂ ಸಾರ್ವ ಜನಿಕರಿಗೆ ಮಾರಾಟ ಮಾಡಲು ಸ್ಥಳೀಯ ಪೆಡ್ಲರ್‌ಗಳಿಗೆ ಪೂರೈಸುತ್ತಿದ್ದರು ಎಂಬುದು ತನಿಖೆಯಿಂದ ತಿಳಿದುಬಂದಿದೆ.

ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಆರೋಪಿ ಗಳು ಮಾದಕ ಪದಾರ್ಥಗಳ ಮಾರಾಟ ದಂಧೆಯಲ್ಲಿ ತೊಡಗಿ ಸಿಕೊಂಡಿದ್ದರು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

Related Articles

Back to top button
error: Content is protected !!