ಶಿಕ್ಷಣ
ವಿದ್ಯಾರ್ಥಿಗಳ ಸಮ್ಮುಖದಲ್ಲೇ ಪ್ರಿನ್ಸಿಪಾಲ್ ಮತ್ತು ಶಿಕ್ಷಕಿ ನಡುವೆ ಹೊಡೆದಾಟ
Views: 46
ಕನ್ನಡ ಕರಾವಳಿ ಸುದ್ದಿ: ಬೆಂಗಳೂರಿನ ಬಸವನಗುಡಿ ವ್ಯಾಪ್ತಿಯ ಖಾಸಗಿ ಶಾಲೆಯೊಂದರಲ್ಲಿ ಕ್ಲಾಸ್ ರೂಮ್ನಲ್ಲಿ ಶಿಕ್ಷಕರೇ ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ. ಶಾಲೆಯ ಪ್ರಿನ್ಸಿಪಾಲ್ ಉಮ್ಮಿಯ ಕುಲಸುಂ ಮತ್ತು ಶಿಕ್ಷಕಿ ರೇಷ್ಮಾ ನಡುವೆ ಗಲಾಟೆ ನಡೆದಿದೆ.
ಶಿಕ್ಷಕಿ ರೇಷ್ಮಾ ಅವರ ಕಾರ್ಯವೈಖರಿಯನ್ನು ಮೆಚ್ಚಿ ಶಾಲಾ ಆಡಳಿತ ಮಂಡಳಿಯು ಅವರಿಗೆ ಬಡ್ತಿ ಮತ್ತು ಪ್ರಶಂಸನಾ ಪತ್ರ ನೀಡಿತ್ತು. ಇದು ಪ್ರಿನ್ಸಿಪಾಲ್ ಅವರ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ವಿಚಾರವಾಗಿ ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿದೆ. ಈ ವೇಳೆ ಪ್ರಿನ್ಸಿಪಾಲ್ ಕಡೆಯವರು ಹಾಗೂ ಶಿಕ್ಷಿಕಿಯ ಕಡೆಯವರು ವಿದ್ಯಾರ್ಥಿಗಳ ಸಮ್ಮುಖದಲ್ಲೇ ಹೊಡೆದಾಡಿದ್ದಾರೆ. ಪ್ರಿನ್ಸಿಪಾಲ್ ಉಮ್ಮಿಯ ಕುಲಸುಂ ಅವರು ಹೊರಗಿನ ಜನರನ್ನು ಕರೆಸಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಶಿಕ್ಷಕಿ ರೇಷ್ಮಾ ಆರೋಪಿಸಿದ್ದಾರೆ. ಈ ಬಗ್ಗೆ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.






