ಯುವಜನ

ವಿದ್ಯಾರ್ಥಿನಿಯನ್ನು ತಬ್ಬಿಕೊಂಡು ಬೆಂಕಿ ಹಚ್ಚಿಕೊಂಡ ಪಾಗಲ್ ಪ್ರೇಮಿ ಸಾವು

Views: 35

ಕನ್ನಡ ಕರಾವಳಿ ಸುದ್ದಿ: ಪೆಟ್ರೋಲ್ ಸುರಿದುಕೊಂಡು ವಿದ್ಯಾರ್ಥಿನಿಯನ್ನು ತಬ್ಬಿಕೊಂಡು, ಸುಟ್ಟಗಾಯಗಳಿಂದ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ರಾತ್ರಿ ಮೃತಪಟ್ಟಿದ್ದಾನೆ.

ಮಳವಳ್ಳಿ ತಾಲೂಕಿನ ಅಲಗೂಡು ಗ್ರಾಮದ ಸತೀಶ್ ಎಂಬುವವರ ಮಗ ಚಂದನ್ (27) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಯುವಕ. ತನ್ನ ಊರಿನಲ್ಲಿ ಕೃಷಿ ಚಟುವಟಿಕೆ ಮಾಡಿಕೊಂಡಿದ್ದ ಈತ ಅದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ. ಈಕೆ ಮೈಸೂರಿನಲ್ಲಿ ದ್ವಿತೀಯ ವರ್ಷದ ಡಿಪ್ಲೊಮಾ ಇಂಜಿನಿಯರಿಂಗ್ ಅಧ್ಯಯನ ಮಾಡುತ್ತಿದ್ದಳು.

ಸೆ.29ರ ಮಂಗಳವಾರ ಬೆಳಗ್ಗೆ ಯುವತಿಯು ಹಾಸ್ಟೆಲ್ನಿಂದ ಕಾಲೇಜಿಗೆ ಹೋಗುವಾಗ ಕರೆ ಮಾಡಿ ಭೇಟಿಯಾಗಬೇಕೆಂದು ಹೇಳಿದ್ದಾನೆ. ಈ ವೇಳೆಯಲ್ಲಿ ಯುವತಿಯು, ಈಗ ನಾನು ಕಾಲೇಜಿಗೆ ತೆರಳುತ್ತಿದ್ದು, ಭೇಟಿ ಸಾಧ್ಯವಿಲ್ಲ ಎಂದು ಆಕೆ ನಿರಾಕರಿಸಿದ್ದಾಳೆ. ಆದರೆ, ಆತ ಕೆಲ ಸಮಯದಲ್ಲಿ ಕಾರಿನಲ್ಲಿ ಅದೇ ರಸ್ತೆಗೆ ಬಂದಿದ್ದಾನೆ. ಅಲ್ಲಿ ಯುವತಿಗೆ ಎದುರಾದ ಆತ ಮತ್ತೆ ಪ್ರೀತಿಸುವಂತೆ ಪೀಡಿಸಿದ್ದ. ಇದರಿಂದ ರೊಚ್ಚಿಗೆದ್ದ ಯುವತಿ ಪ್ರೀತಿ ನಿರಾಕರಿಸಿ ಕಾಲೇಜಿಗೆ ಹೋರಟಳು. ಇದರಿಂದ ಕೋಪಗೊಂಡ ಚಂದನ್ ಈಕೆಯ ಮೇಲೆ ಏಕಾಏಕಿ ಪೆಟ್ರೋಲ್ ಸುರಿದು, ತಾನೂ ಪೆಟ್ರೋಲ್ ಸುರಿದುಕೊಂಡು ಆಕೆಯನ್ನು ತಬ್ಬಿಕೊಂಡು ಬೆಂಕಿ ಹಚ್ಚಿಕೊಂಡಿದ್ದನು.

ಈ ಘಟನೆಯಿಂದ ಶೇ.80ರಷ್ಟು ಸುಟ್ಟುಗಾಯಗಳಿಂದ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸತೀಶ್ನನ್ನು ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 8 ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ರಾತ್ರಿ ಯುವಕ ಮೃತಪಟ್ಟಿದ್ದಾನೆ.

ಮರಣೋತ್ತರ ಪರೀಕ್ಷೆಯ ನಂತರ ಬುಧವಾರ ಮಧ್ಯಾಹ್ನ ಯುವಕನ ಮೃತದೇಹವನ್ನು ಪೋಷಕರಿಗೆ ಹಸ್ತಾಂತರ ಮಾಡಲಾಯಿತು. ಶೇ.20 ರಷ್ಟು ಸುಟ್ಟ ಗಾಯಗಳಿಂದ ಗಾಯಗೊಂಡಿದ್ದ ಯುವತಿ ಚೇತರಿಸಿಕೊಳ್ಳುತ್ತಿದ್ದಾಳೆ. ಯುವತಿಯ ಪೋಷಕರು ನೀಡಿದ ದೂರಿನ ಮೇಲೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

 

 

Related Articles

Back to top button
error: Content is protected !!