ಇತರೆ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆಯೇ ಶಿಕ್ಷಕ ಪರಾರಿ

Views: 4

ಕನ್ನಡ ಕರಾವಳಿ ಸುದ್ದಿ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಯೊಂದರ ಶಿಕ್ಷಕ ಅಂದನಗೌಡ ವಿರುದ್ಧ ಪೋಕೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉನ್ನತಾಧಿಕಾರಿಗಳು ಆರೋಪಿ ಶಿಕ್ಷಕನನ್ನು ಸೇವೆಯಿಂದ ಅಮಾನತುಗೊಳಿಸಿದ್ದು, ತಲೆಮರೆಸಿಕೊಂಡಿರುವ ಆತನ ಬಂಧನಕ್ಕೆ ಪೊಲೀಸರು ಮೂರು ವಿಶೇಷ ತಂಡಗಳನ್ನು ರಚಿಸಿದ್ದಾರೆ.

ಕೊಪ್ಪಳ ಗ್ರಾಮೀಣ ಭಾಗದ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಂದನಗೌಡ, ಶಾಲಾ ಕೊಠಡಿಯೊಳಗೆ ವಿದ್ಯಾರ್ಥಿನಿಯರನ್ನು ಕರೆದುಕೊಂಡು ಹೋಗಿ ಅಸಭ್ಯವಾಗಿ ವರ್ತಿಸುತ್ತಿದ್ದ ಹಾಗೂ ವಿದ್ಯಾರ್ಥಿನಿಯರ ಖಾಸಗಿ ಅಂಗಗಳನ್ನು ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸ ಲಾಗಿದೆ. ಶಿಕ್ಷಕನ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿನಿಯರು ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ, ಶಿಕ್ಷಕನಿಂದ ಕಿರುಕುಳವಾಗುತ್ತಿದ್ದು ಸಹಾಯ ಮಾಡುವಂತೆ ಮನವಿ ಮಾಡಿದ್ದರು. ಮಕ್ಕಳ ಸಹಾಯವಾಣಿಯಿಂದ ಮಾಹಿತಿ ಲಭ್ಯ ವಾದ ಬಳಿಕ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ತಕ್ಷಣ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಧೈರ್ಯವಾಗಿ ಮುಂದೆ ಬಂದ ವಿದ್ಯಾರ್ಥಿನಿಯರು ಶಿಕ್ಷಕನ ಅಸಭ್ಯ ವರ್ತನೆ ಹಾಗೂ ಲೈಂಗಿಕ ಕಿರುಕುಳದ ಕುರಿತು ಅಧಿಕಾರಿಗಳ ಮುಂದೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಶಿಕ್ಷಕನ ವಿರುದ್ಧ ಪ್ರಕರಣ ದಾಖಲು

ಮಕ್ಕಳ ರಕ್ಷಣಾ ಘಟಕದ ತನಿಖೆ ಹಾಗೂ ನಿರ್ದೇಶನದ ಬಳಿಕ ಘಟನೆ ನಡೆದ ನಾಲ್ಕು ದಿನಗಳ ನಂತರ ಶಾಲೆಯ ಮುಖ್ಯ ಶಿಕ್ಷಕಿ ಕೊಪ್ಪಳ ಮಹಿಳಾ ಪೊಲೀಸ್ ಠಾಣೆಗೆ ತೆರಳಿ ಅಂದನಗೌಡ ವಿರುದ್ದ ಅಧಿಕೃತ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿ ಶಿಕ್ಷಕ ತಲೆಮರೆಸಿ ಕೊಂಡಿದ್ದು ಆತನ ಪತ್ತೆಗೆ ಬಲೆ ಬೀಸಿದ್ದಾರೆ.

Related Articles

Back to top button
error: Content is protected !!