ಇತರೆ

ವಿದ್ಯಾರ್ಥಿನಿ ಮೇಲೆ ಮೂವರಿಂದ ಸಾಮೂಹಿಕ ಅತ್ಯಾಚಾರ, ಅರೆಸ್ಟ್

Views: 142

ಕನ್ನಡ ಕರಾವಳಿ ಸುದ್ದಿ: ವಿದ್ಯಾರ್ಥಿನಿ ಮೇಲೆ ಮೂವರು ಕಾಮುಕರು ಗ್ಯಾಂಗ್ ರೇಪ್ ನಡೆಸಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ಬೆಂಗಳೂರಿನ ಕಾಲೇಜೊಂದರಲ್ಲಿ ಓದುತ್ತಿದ್ದ ಯುವತಿಯನ್ನು ಪರಿಚಯಿಸಿಕೊಂಡಿದ್ದ ಯುವಕನೊಬ್ಬ ಆಕೆಯನ್ನು ರಾಮನಗರಕ್ಕೆ ಕರೆದೊಯ್ದು ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ.

ಸಂತ್ರಸ್ತೆ ನೀಡಿದ ದೂರಿನ ಹಿನ್ನೆಲೆಯಲ್ಲಿ ರಾಮನಗರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಕಾಸ್, ಪ್ರಶಾಂತ್ ಹಾಗೂ ಚೇತನ್ ಬಂಧಿತ ಆರೋಪಿಗಳು.

ಬೆಂಗಳೂರಿನಲ್ಲಿ ಕಾಲೇಜಿಗೆ ಹೋಗುತ್ತಿದ್ದ ಯುವತಿಯನ್ನು ವಿಕಾಸ್ ಪರಿಚಯಿಸಿಕೊಂಡು ಬಳಿಕ ಪ್ರೀತಿ-ಪ್ರೇಮ ಎಂದು ಯುವತಿಯ ಹಿಂದೆ ಬಿದ್ದಿದ್ದಾನೆ. ಬಳಿಕ ಯುವತಿಯನ್ನು ನಂಬಿಸಿ ರಾಮನಗರಕ್ಕೆ ಕರೆದೊಯ್ದು ಸ್ನೇಹಿತರೊಂದಿಗೆ ಸೇರಿ ಗ್ಯಾಂಗ್ ರೇಪ್ ನಡೆಸಿ ಕೃತ್ಯದ ವಿಡಿಯೋ ಮಾಡಿಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿದ್ದಾನೆ. ಅಲ್ಲದೇ ತಾನು ಕರೆದಾಗಲೆಲ್ಲ ಬರಬೇಕು ಎಂದು ಫೋನ್ ಮಾಡಿ ಹೆದರಿಸಿದ್ದಾನೆ. ಸಂಕಷ್ಟಕ್ಕೆ ಸಿಲುಕಿದ ಯುವತಿ ಪೊಲೀಸರಿಗೆ ದೂರು ನೀಡಿದ್ದಳು. ಸದ್ಯ ಕಾಮುಕ ಮೂವರನ್ನು ಪೊಲೀಸರು ಬಂಧಿಸಿದ್ದಾರೆ

Related Articles

Back to top button