ಶಿಕ್ಷಣ
ವಿದ್ಯಾರ್ಥಿ ಪಾಠ ಕೇಳುತ್ತಿರುವಾಗಲೇ ಹೃದಯಾಘಾತದಿಂದ ಸಾವು

Views: 217
ಕನ್ನಡ ಕರಾವಳಿ ಸುದ್ದಿ: ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಪಾಠ ಕೇಳುತ್ತಿರುವಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.
ಮನೋಜ್ ಕುಮಾರ್ (10) ಮೃತ ದುರ್ದೈವಿ.ತಾಲೂಕಿನ ಕುರಬರಗೇರಿಯಲ್ಲಿ ಈ ಘಟನೆ ನಡೆದಿದೆ.
ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮನೋಜ್ ಕುಮಾರ್ ಪಾಠ ಕೇಳುತ್ತಿದ್ದಾಗ ಕುಸಿದುಬಿದ್ದು, ಮೃತಪಟ್ಟಿದ್ದಾನೆ. ಮೃತ ಮನೋಜ್ ಕುಮಾರ್ ಹೃದಯದಲ್ಲಿ ರಂಧ್ರ ಇದ್ದು, ಜಯದೇವ, ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಎಂದು ತಿಳಿದುಬಂದಿದೆ.