ವಿದ್ಯುತ್ ದರ ಹೆಚ್ಚಳ ಖಂಡಿಸಿ ನೇಕಾರರು ಜೂ 12 ರಂದು ಹೆದ್ದಾರಿ ತಡೆದು ಪ್ರತಿಭಟನೆಗೆ ನಿಧಾ೯ರ

Views: 0
ಬೆಳಗಾವಿ ತಾಲೂಕಿನ ಸಳೇಬಾವಿ ಗ್ರಾಮದ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಜೂ, 8 ರಂದು ನಡೆದ ಸಭೆಯಲ್ಲಿ ಜೂ 12 ರಂದು ವಿದ್ಯುತ್ ದರ ಹೆಚ್ಚಳದ ಬಗ್ಗೆ ಸಕಾ೯ರದ ವಿರುದ್ಧ ಜಿಲ್ಲೆಯ ಅಧಿಕಾರಿಗಳಿಗೆ ಮನವಿ ನೀಡಿ, ಹೆದ್ದಾರಿ ತಡೆದು ಪ್ರತಿಭಟನೆಗೆ ನಿಧಾ೯ರ ಮಾಡಿದ್ದಾರೆ.
ಪ್ರತಿಯೊಬ್ಬರಿಗೂ ಉಚಿತ ವಿದ್ಯುತ್ ಘೋಷಿಸಿರುವ ಸಕಾ೯ರ ಇನ್ನೊಂದೆಡೆ ಕೈಮಗ್ಗಗಳ ವಿದ್ಯುತ್ ದರ ಹೆಚ್ಚಿಸುವ ಮೂಲಕ ನೇಕಾರರ ಹೊಟ್ಟೆ ಮೇಲೆ ಬರೆ ಎಳೆಯುವ ಕೆಲಸ ಮಾಡಿದೆ, ಸರಕಾರ ಈ ಆದೇಶ ವಾಪಾಸು ಪಡೆಯದಿದ್ದರೆ ಇನ್ನು ಮುಂದೆ ವಿದ್ಯುತ್ ಬಿಲ್ ಕಟ್ಟದಿರಲು ನೇಕಾರರು ನಿಧ೯ರಿಸಿದ್ದಾರೆ.
ನೇಕಾರ ಮುಖಂಡ ನಾರಾಯಣ ಲೋಕರೆ ಮಾತನಾಡಿ, ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ರಾಜ್ಯ ಸರಕಾರ ಗ್ಯಾರಂಟಿ ಹೆಸರಿನಲ್ಲಿ ಜನರಿಗೆ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿರುವುದು ಸ್ವಾಗತಾರ್ಹ, ಆದರೆ, ಇತ್ತ ನೇಕಾರರ ಜೀವನದೊಂದಿಗೆ ಚೆಲ್ಲಾಟ ಆಡುತ್ತಿರುವ ಸರಕಾರ ವಿದ್ಯುತ್ ದರ ಹೆಚ್ಚಿಸುವ ಮೂಲಕ ಶಾಕ್ ನೀಡಿದೆ, ಒಂದು ಕೈಯಿಂದ ಕೊಟ್ಟು ಇನ್ನೊಂದು ಕೈಯಿಂದ ದುಪ್ಪಟ್ಟು, ಇನ್ನೊಂದು ಕೈಯಿಂದ ದುಪ್ಪಟ್ಟು ಕಸಿದು ಕೊಳ್ಳಲು ಸರಕಾರ ಹುನ್ನಾರ ನಡೆಸಿದೆ ಎಂದು ವಾಗ್ದಾಳಿ ನಡೆಸಿದರು.
ತ್ರಿಪೇಸ್ ವಿದ್ಯುತ್ ನ ಪ್ರತಿ ಎಚ್ ಪಿಗೆ ನಿಗದಿತ ದರ ಈ ಮುಂಚೆ 80 ರೂ ಇತ್ತು, ಈಗ 140 ರೂಪಾಯಿಗೆ ಏರಿಕೆಯಾಗಿದೆ. ಅಂದರೆ ದಿಡೀರ್ 60 ರೂ. ಏರಿಕೆ ಮಾಡಿದೆ. ಈಗ 2.55 ರೂ. ಹೆಚ್ಚಿಸಿದೆ. ಅಂದರೆ 1.98 ರೂಪಾಯಿ ಹೆಚ್ಚಿಸಿದಂತಾಗಿದೆ, ಜೊತೆಗೆ ತೆರಿಗೆಯೂ ಹೆಚ್ಚಾಗಿದೆ ಎಂದು ಆರೋಪಿಸಿದರು.
ಸರಕಾರ ವಿದ್ಯುತ್ ದರ ಕಡಿಮೆ ಮಾಡದಿದ್ದರೆ ಮುಂದಿನ ದಿನಗಳಲ್ಲಿ ನಿರಂತರ ಹೋರಾಟ ನಡೆಸಲಾಗುವುದು ನೇಕಾರರು ಯಾವುದೇ ಕಾರಣಕ್ಕೂ ಬಿಲ್ ಕಟ್ಟುವುದಿಲ್ಲ ಎಲ್ಲಾ ಭಾಗದ ನೇಕಾರರನ್ನು ಒಗ್ಗೂಡಿಸಿಕೊಂಡು ಹೋರಾಟ ಮಾಡಲಾಗುವುದೆಂದು ಎಚ್ಚರಿಸಿದ್ದಾರೆ.






