ರಾಜಕೀಯ

ವಿದ್ಯುತ್ ಬಿಲ್ ಕಡಿಮೆ ಮಾಡುವ 1 ಕೋಟಿ ಮನೆಗಳಿಗೆ ಸೋಲಾರ್ ಪ್ಯಾನೆಲ್ “ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆ” ಘೋಷಣೆ  

Views: 82

ನವದೆಹಲಿ: ಅಯೋಧ್ಯೆಯಿಂದ ಹಿಂದಿರುಗಿದ ನಂತರ ನನ್ನ ಮೊದಲ ನಿರ್ಧಾರ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಯೋಜನೆಯನ್ನು ಘೋಷಿಸಿದ್ದಾರೆ.

ಪ್ರಧಾನಿ ಮೋದಿ ಅಯೋಧ್ಯೆಯಿಂದ ಹಿಂದಿರುಗಿದ ನಂತರ, ಜನರು ತಮ್ಮ ಮನೆಗಳಲ್ಲಿ ಸೋಲಾರ್‌ ಪ್ಯಾನೆಲ್ ಅಳವಡಿಸಿಕೊಳ್ಳಲು ಸಹಾಯ ಮಾಡುವ ಹೊಸ ಯೋಜನೆಯನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ

ಎಂದು ತಿಳಿಸಿದ್ದಾರೆ. ಈ ನಿರ್ಧಾರವು ಎಲ್ಲಾ ಭಕ್ತರು ಸೂರ್ಯವಂಶಿ ಭಗವಾನ್ ಶ್ರೀರಾಮನ ಬೆಳಕಿನಿಂದ ಶಕ್ತಿಯನ್ನು ಪಡೆಯುತ್ತಾರೆ ಎಂಬ ಅರಿವಿನಿಂದ ಪ್ರೇರಿತವಾಗಿದೆ ಎಂದು ಮೋದಿ ಹೇಳಿದ್ದಾರೆ.

ಅಯೋಧ್ಯೆಯಿಂದ ಹಿಂದಿರುಗಿದ ನಂತರ ನಾನು ತೆಗೆದುಕೊಂಡ ಮೊದಲ ನಿರ್ಧಾರವೆಂದರೆ, ನಮ್ಮ ಸರ್ಕಾರವು ‘ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ’ಯನ್ನು 1 ಕೋಟಿ ಮನೆಗಳಿಗೆ ಮೇಲ್ಛಾವಣಿ ಸೌರ ಅಳವಡಿಸುವ ಗುರಿಯೊಂದಿಗೆ ಪ್ರಾರಂಭಿಸಲಿದೆ ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದು ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಅನ್ನು ಕಡಿಮೆ ಮಾಡುವುದಲ್ಲದೆ, ಇಂಧನ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುತ್ತದೆ ಎಂದು ಮೋದಿ ತಿಳಿಸಿದ್ದಾರೆ.

Related Articles

Back to top button
error: Content is protected !!