ರಾಜಕೀಯ

ವಿಧಾನ ಪರಿಷತ್‌ಗೆ ರವಿಚಂದ್ರನ್, ಕೆ.ವಿ.ಪ್ರಭಾಕರ್, ಮಂಜುಳಾ ನಾಮನಿರ್ದೇಶನಕ್ಕೆ ಸಮ್ಮತಿ

Views: 0

ಕನ್ನಡ ಕರಾವಳಿ ಸುದ್ದಿ: ಕರ್ನಾಟಕ ವಿಧಾನ ಪರಿಷತ್ತಿನ ನಾಮ ನಿರ್ದೇಶಿತ ಸ್ಥಾನಗಳ ಭರ್ತಿಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು, ಶೀಘ್ರವೇ ಅಧಿಕೃತ ಘೋಷಣೆ ಬಾಕಿಯಿದೆ. ಗುರುವಾರ ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್, ವಿಧಾನ ಪರಿಷತ್ತಿನ ನಾಮ ನಿರ್ದೇಶನ ಸಂಬಂಧ ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸಿದ್ದು, ಕನ್ನಡ ಸಿನಿಮಾ ತಾರೆ ವಿ.ರವಿಚಂದ್ರನ್, ಮಾಜಿ ಸಿಎಂ ಸಿದ್ದ ರಾಮಯ್ಯ ಅವರ ಮಾಧ್ಯಮ ಕಾರ್ಯದರ್ಶಿ ಕೆ.ವಿ.ಪ್ರಭಾಕರ್ ಹಾಗೂ ಮಂಜುಳಾ ನಾಯ್ಡು ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮೂರು ಸ್ಥಾನಕ್ಕೆ ವಿವಿಧ ಹೆಸರುಗಳ ಕುರಿತು ಸಮಾಲೋಚನೆ ನಡೆದಿದ್ದು, ಅಂತಿಮವಾಗಿ ಮೂವರ ಹೆಸರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ, ರವಿ ಚಂದ್ರನ್ ಪರವಾಗಿ ಶಿವಕುಮಾ‌ರ್ ಬ್ಯಾಟ್‌ ಬೀಸಿದ್ದಾರೆ. ಇನ್ನೊಂದೆಡೆ, ತಮ್ಮ ಮಾಧ್ಯಮ ಕಾರ್ಯದರ್ಶಿ ಕೆ.ವಿ. ಪ್ರಭಾಕರ್‌ಗೆ ಸ್ಥಾನ ನೀಡುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದರು.

ರವಿಚಂದ್ರನ್ ಚಿತ್ರರಂಗದ ಖ್ಯಾತ ನಿರ್ಮಾಪಕ ಹಾಗೂ ನಿರ್ದೇಶಕ ಇವರನ್ನು ಚಲನಚಿತ್ರ/ಕಲಾ ಕ್ಷೇತ್ರದಿಂದ ಪರಿಷತ್‌ಗೆ ಆಯ್ಕೆ ಮಾಡಲಾಗಿದೆ.

ಕೆ.ವಿ.ಪ್ರಭಾಕರ್ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರಾಗಿದ್ದ ಹಿರಿಯ ಪತ್ರಕರ್ತ ಕೆ.ವಿ.ಪ್ರಭಾಕರ್ ಅವರನ್ನು ಪತ್ರಿಕೋದ್ಯಮ ಕ್ಷೇತ್ರದಿಂದ ನಾಮನಿರ್ದೇಶನ ಮಾಡಲಾಗಿದೆ.

ಮಂಜುಳಾ ಚಿನ್ಮಯಾನಂದ್ ಇವರನ್ನು ಸಾಮಾಜಿಕ ಸೇವೆ ಮತ್ತು ಸಹಕಾರ ರಂಗದ ಹಿನ್ನೆಲೆಯಿಂದ ವಿಧಾನ ಪರಿಷತ್ ಸದಸ್ಯರಾಗಿ ನೇಮಕ ಮಾಡಲಾಗಿದೆ.

ಕರ್ನಾಟಕ ವಿಧಾನ ಪರಿಷತ್ತಿನ ಒಟ್ಟು 75 ಸ್ಥಾನಗಳ ಪೈಕಿ, ಸಾಹಿತ್ಯ, ಕಲೆ, ವಿಜ್ಞಾನ, ಸಹಕಾರ ಮತ್ತು ಸಮಾಜ ಸೇವೆ ಕ್ಷೇತ್ರಗಳಲ್ಲಿನ ಸಾಧನೆಯನ್ನು ಗುರುತಿಸಿ ರಾಜ್ಯಪಾಲರು ಸರ್ಕಾರದ ಶಿಫಾರಸಿನ ಮೇರೆಗೆ ಒಟ್ಟು 11 ಸದಸ್ಯರನ್ನು ನೇಮಕ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ.

Related Articles

Back to top button
error: Content is protected !!