ರಾಜಕೀಯ

ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕನಾಗಿ ಕೋಟ ಶ್ರೀನಿವಾಸ್‌ ಪೂಜಾರಿ ಆಯ್ಕೆ

Views: 1

ಬೆಂಗಳೂರು, ಹಲವು ದಿನಗಳಿಂದ ಬಾಕಿ ಉಳಿದಿದ್ದ ವಿಧಾನ ಪರಿಷತ್ತಿನ ವಿಪಕ್ಷ ನಾಯಕನ ಸ್ಥಾನಕ್ಕೆ ಅಭ್ಯರ್ಥಿಯನ್ನು ನೇಮಿಸಲಾಗಿದೆ. ಬಿಜೆಪಿಯ ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ್‌ ಪೂಜಾರಿ ಅವರನ್ನು ಪಕ್ಷ ಆಯ್ಕೆ ಮಾಡಿ ಆದೇಶ ಹೊರಡಿಸಿದೆ.

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್‌ ಪ್ರಕಾಶ್‌ ನಡ್ಡಾ ಅವರ ಆದೇಶದಂತೆ ವಿಧಾನ ಪರಿಷತ್‌ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ್‌ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೊರಡಿಸಿರುವ ಪ್ರಕಟಣೆ ತಿಳಿಸಿದೆ.

ಕೋಟ ಶ್ರೀನಿವಾಸ ಪೂಜಾರಿ ಅವರು ಎರಡನೇ ಭಾರಿ ವಿಧಾನ ಪರಿಷತ್‌ನ ವಿಪಕ್ಷ ನಾಯಕನಾಗಿ ಆಯ್ಕೆಯಾಗುತ್ತಿದ್ದಾರೆ. ಈ ಹಿಂದೆ 2018ರಲ್ಲಿ ವಿಧಾನ ಪರಿಷತ್‌ನ ವಿಪಕ್ಷ ನಾಯಕನಾಗಿ ಆಯ್ಕೆಯಾಗಿದ್ದರು.

ವಿಧಾನಪರಿಷತ್ ವಿಪಕ್ಷ ನಾಯಕನ ಜೊತೆಗೆ ವಿಧಾನಸಭೆ ಉಪ ನಾಯಕ, ಮುಖ್ಯ ಸಚೇತಕರನ್ನು ಸಹ ನೇಮಕ ಮಾಡಲಾಗಿದೆ. ವಿಧಾನಪರಿಷತ್ ವಿಪಕ್ಷ ಉಪ ನಾಯಕನಾಗಿ ಸುನೀಲ್ ವಲ್ಯಾಪುರೆ ಅವರನ್ನು ನೇಮಕ ಮಾಡಲಾಗಿದೆ. ಅಲ್ಲದೆ ವಿಧಾನಸಭೆಯ ವಿಪಕ್ಷ ಉಪ ನಾಯಕನಾಗಿ ಅರವಿಂದ ಬೆಲ್ಲದ್ ನೇಮಕವಾಗಿದ್ದಾರೆ. ವಿಧಾನಸಭೆಯ ಮುಖ್ಯ ಸಚೇತಕರಾಗಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ನೇಮಕವಾದರೆ, ವಿಧಾನಪರಿಷತ್‌ನ ಮುಖ್ಯ ಸಚೇತಕರಾಗಿ ಎನ್. ರವಿಕುಮಾರ್ ಅವರನ್ನು ನೇಮಿಸಲಾಗಿದೆ.

ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಹಾಗೂ ಅಶೋಕ್ ಅವರನ್ನು ವಿಪಕ್ಷ ನಾಯಕನನ್ನಾಗಿ ನೇಮಕ ಮಾಡಿದ್ದಕ್ಕೆ ಅರವಿಂದ್ ಬೆಲ್ಲದ್​ ಅಸಮಾಧಾನಗೊಂಡಿದ್ದರು. ಯಡಿಯೂರಪ್ಪ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ತಪ್ಪಿದ್ದಕ್ಕೆ ಅಸಮಾಧಾನಗೊಂಡಿದ್ದ ಅರವಿಂದ ಬೆಲ್ಲದ್ ಅವರನ್ನು ಸಮಾಧಾನಪಡಿಸಲು ವಿಧಾನಸಭೆ ವಿಪಕ್ಷ ನಾಯಕ ಸ್ಥಾನ ನೀಡಲಾಗಿದೆ.

ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಎನ್​ ರವಿ ಕುಮಾರ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ನಡುವೆ ವಿಧಾನಪರಿಷತ್ ವಿಪಕ್ಷ ಸ್ಥಾನಕ್ಕೆ ಪೈಪೋಟಿ ಇತ್ತು. ಆದರೆ ಬಿಜೆಪಿ ಹೈಕಮಾಂಡ್ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ನೇಮಿಕಕ್ಕೆ ಒಲವು ಹಸಿರು ನಿಶಾನೆ ತೋರಿದೆ.

ಹೊಸ ಪದಾಧಿಕಾರಿಗಳ ನೇಮಕದ ಬಗ್ಗೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ಸನ್ಮಾನ್ಯ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ನಡ್ಡಾ ಜೀ ಅವರ ಸೂಚನೆ ಮೇರೆಗೆ ವಿಧಾನಸಭೆ ಹಾಗೂ ವಿಧಾನ ಪರಿಷತ್ ಗಳ ಅಧಿಕೃತ ವಿರೋಧ ಪಕ್ಷದ ವಿವಿಧ ಸ್ಥಾನಗಳಿಗೆ ನಿಯುಕ್ತಿಗೊಂಡಿರುವ ಶ್ರೀ ಕೋಟಾ ಶ್ರೀನಿವಾಸ ಪೂಜಾರಿ, ಶ್ರೀ ಸುನೀಲ್ ವಲ್ಯಾಪುರೆ, ಶ್ರೀ ಎನ್.ರವಿಕುಮಾರ್ ಹಾಗೂ ಶ್ರೀ ಅರವಿಂದ ಬೆಲ್ಲದ್, ಶ್ರೀ ದೊಡ್ಡನಗೌಡ ಹೆಚ್ ಪಾಟೀಲ್ ಅವರುಗಳಿಗೆ ಆತ್ಮೀಯ ಅಭಿನಂದನೆಗಳು.ಉಭಯ ಸದನಗಳಲ್ಲಿ ಪಕ್ಷದ ಆಶಯಗಳಿಗೆ ಪೂರಕವಾಗಿ ಜನಸಾಮಾನ್ಯರ ದನಿಯಾಗಿ ಪರಿಣಾಮಕಾರಿಯಾಗಿ ಹೋರಾಟ ನಡೆಸುವ ಮೂಲಕ ಪಕ್ಷದ ಘನತೆ ಹೆಚ್ಚಿಸಿ, ಪ್ರಜಾಪ್ರಭುತ್ವದ ಮೌಲ್ಯ ಎತ್ತಿಹಿಡಿಯವಲ್ಲಿ ತಾವು ಯಶಸ್ವಿಯಾಗಲೆಂದು ಹಾರೈಸುವೆ ಎಂದು ಶುಭಕೋರಿದ್ದಾರೆ.

Related Articles

Back to top button
error: Content is protected !!