ರಾಜಕೀಯ

ವಿಧಾನ ಪರಿಷತ್ ಉಪಚುನಾವಣೆ: ಜಗದೀಶ್ ಶೆಟ್ಟರ್ ಸೇರಿ ಮೂವರಿಗೆ ಕಾಂಗ್ರೆಸ್ ಟಿಕೆಟ್

Views: 0

ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ಪ್ರಕಟಿಸಿದ್ದು,ಬಿಜೆಪಿ ತೊರೆದು ಕಾಂಗ್ರೆಸ್ಸಿಗೆ ಸೇರಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿದಂತೆ ಮೂವರಿಗೆ ಟಿಕೆಟ್ ನೀಡಿದೆ.

ಲಕ್ಷ್ಮಣ ಸವದಿ, ಆರ್ ಶಂಕರ್ ಹಾಗೂ ಬಾಬುರಾವ್ ಚೆಂಚಸೂರ್ ಅವರ ರಾಜೀನಾಮೆಯಿಂದ ತೆರವಾದ ಮೂರು ಸ್ಥಾನಗಳಿಗೆ ಚುನಾವಣಾ ಆಯೋಗ ಇಂದು ಉಪಚುನಾವಣೆ ಘೋಷಿಸಿದೆ.

ಹುಬ್ಬಳ್ಳಿ- ದಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಶೆಟ್ಟರ್ ಅವರಿಗೆ, ಸಚಿವ ಬೋಸರಾಜ್ ಹಾಗೂ ತಿಪ್ಪಣ್ಣ ಕಮಕನೂರು ಅವರಿಗೆ ಕರ್ನಾಟಕ ವಿಧಾನ ಪರಿಷತ್ ಸ್ಥಾನಕ್ಕೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಜೂನ್ 30ರಂದು ಉಪ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

Related Articles

Back to top button
error: Content is protected !!