ರಾಜಕೀಯ
ವಿಧಾನ ಸಭಾ ಉಪ ಚುನಾವಣೆ: ಅಚ್ಚರಿ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಿದ ಬಿಜೆಪಿ
Views: 119
ಕನ್ನಡ ಕರಾವಳಿ ಸುದ್ದಿ:ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಬಿಜೆಪಿ ಹೈಕಮಾಂಡ್ ಹಳೆಯ ಮುಖಗಳ ಜೊತೆಗೆ ಹೊಸ ಸಮೀಕರಣಕ್ಕೆ ಮನ್ನಣೆ ನೀಡುವ ಮೂಲಕ ಅಚ್ಚರಿಯ ನಿರ್ಧಾರಗಳನ್ನು ಕೈಗೊಂಡಿದೆ.
ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಶಾಸಕ ವೀರಣ್ಣ ಚರಂತಿಮಠ್ ಅವರಿಗೆ ನಿರೀಕ್ಷೆಯಂತೆ ಟಿಕೆಟ್ ಘೋಷಿಸಲಾಗಿದೆ.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಪ್ರಬಲವಾಗಿರುವ ಲಿಂಗಾಯತ ಅಥವಾ ಮರಾಠ ಸಮುದಾಯದ ನಾಯಕರಿಗೆ ಟಿಕೆಟ್ ನೀಡುವ ಪದ್ಧತಿಯನ್ನು ಬದಿಗೊತ್ತಿ, ಇದೇ ಮೊದಲ ಬಾರಿಗೆ ಪರಿಶಿಷ್ಟ ಪಂಗಡದ (ST) ನಾಯಕ ಶ್ರೀನಿವಾಸ್ ಟಿ ದಾಸಕರಿಯಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ.






