ರಾಜಕೀಯ

ವಿಪಕ್ಷ ನಾಯಕನಾಗಿ ಬಿಜೆಪಿ ಶಾಸಕ ಆರ್ ಅಶೋಕ್ ಆಯ್ಕೆ

Views: 0

ಬೆಂಗಳೂರು: ಪದ್ಮನಾಭನಗರ ಬಿಜೆಪಿ ಶಾಸಕ ಆರ್ ಅಶೋಕ್ ಅವರನ್ನು ವಿಪಕ್ಷ ನಾಯಕನಾಗಿ ಆಯ್ಕೆ ಮಾಡಲಾಗಿದೆ.

ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಪಕ್ಷದೊಳಗೆ ಅಸಮಾಧಾನ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್ ಆಗಮಿಸಿದ್ದರು.

ಶಾಸಕರ ಅಭಿಪ್ರಾಯಗಳನ್ನು ಆಲಿಸಿದ ವೀಕ್ಷಕರು ವಿರೋಧದ ನಡುವೆಯೂ ವಿಪಕ್ಷ ನಾಯಕನಾಗಿ ಆರ್ ಅಶೋಕ್ ಅವರನ್ನು ನೇಮಿಸಿದ್ದಾರೆ. ಇನ್ನು ಇದೇ ವೇಳೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಆರ್ ಅಶೋಕ್ ಅವರು, ಪಕ್ಷ ದೊಡ್ಡ ಜವಾಬ್ದಾರಿಯನ್ನು ನೀಡಿದೆ. ಅದನ್ನು ಸರಿಯಾಗಿ ನಿಭಾಯಿಸುತ್ತೇನೆ.

ಸಾಮಾನ್ಯ ಕಾರ್ಯಕರ್ತನಾಗಿ 45 ವರ್ಷಗಳಿಂದ ಕೆಲಸ ಮಾಡಿದ್ದೇನೆ. ಕಾಂಗ್ರೆಸ್ ನ ದುರಾಳಿತವ್ನನು ಜನರ ಮುಂದಿಡಲು ಪ್ರಯತ್ನಿಸುತ್ತೇವೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 28 ಸ್ಥಾನಗಳನ್ನು ಗೆಲ್ಲುವ ಗುರಿ ಹಾಕಿಕೊಳ್ಳತ್ತೇವೆ ಎಂದು ಹೇಳಿದರು.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಆರ್ ಅಶೋಕ್ ಅವರಿಗೆ ಕರೆ ಮಾಡಿ ಮಾತುಕತೆ ನಡೆಸಿರುವುದಾಗಿ ಅವರ ಆಪ್ತ ಮೂಲಗಳು ತಿಳಿಸಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ.

ಪಕ್ಷದ ಹೊಸ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಪಕ್ಷದ ವೀಕ್ಷಕರಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌, ದುಷ್ಯಂತ ಕುಮಾರ್‌ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ಸಂಘಟನಾ ಕಾರ್ಯದರ್ಶಿ ರಾಜೇಶ್‌, ಕೋಟ ಶ್ರೀನಿವಾಸ ಪೂಜಾರಿ ಮತ್ತಿತರರು ವೇದಿಕೆಯಲ್ಲಿದ್ದರು.

ವಿಜಯೇಂದ್ರ ಮತ್ತು ನಾನು ಜೋಡೆತ್ತುಗಳಂತೆ ಕೆಲಸ ಮಾಡುತ್ತೇವೆ- ಆರ್ ಅಶೋಕ

ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಬಳಿಕ ಶಾಸಕರನ್ನು ಉದ್ದೇಶಿಸಿ ಮಾತನಾಡಿದ ಆರ್ ಅಶೋಕ ಅವರು, ಪಕ್ಷದ ನೂತನ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಜೋಡೆತ್ತಿನಂತೆ ಕೆಲಸ ಮಾಡುತ್ತೇವೆ ಎಂದು ಹೇಳಿದರು. ಅವರ ಮಾತುಗಳ ಮುಖ್ಯ ಅಂಶಗಳು ಹೀಗಿವೆ –

1 ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಆರು ತಿಂಗಳಾಗುತ್ತಲೇ ಭ್ರಷ್ಟಾಚಾರ ತಾಂಡವವಾಡತೊಡಗಿದೆ. ಕಾಸಿಗಾಗಿ ಹುದ್ದೆ ದಂಧೆ ಸೇರಿ ಹಲವು ಭ್ರಷ್ಟ ವಿಚಾರಗಳು ಗಮನಸೆಳೆದಿವೆ.

2. ಬಿಜೆಪಿಯ ಬಲ ಹೆಚ್ಚಾಗಿದೆ. ಲೋಕಸಭೆ ಚುನಾವಣೆ ಮತ್ತು ವಿಧಾನಸಭೆಯಲ್ಲಿ ಜೆಡಿಎಸ್ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಿರುವ ಕಾರಣ 80ಕ್ಕೂ ಹೆಚ್ಚು ಸ್ಥಾನ ಬಲ ಮೈತ್ರಿಗೆ ಇದೆ.

3. ಲೋಕಸಭೆ ಚುನಾವಣೆಯಲ್ಲಿ ಕಳೆದ ಬಾರಿ 25 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿತ್ತು. ಈ ಸಲದ ಚುನಾವಣೆಯಲ್ಲಿ 28 ಸ್ಥಾನಗಳನ್ನು ಗೆದ್ದುಕೊಂಡು ಬಿಜೆಪಿ ಶಕ್ತಿ ಏನು ಎಂಬುದನ್ನು ವರಿಷ್ಠರಿಗೆ ತೋರಿಸಿಕೊಡಬೇಕು.

4. ಬಿಜೆಪಿಯಲ್ಲಿ ಯಾವುದೇ ಭಿನ್ನಮತ ಇಲ್ಲ. ಎಲ್ಲರೂ ಒಟ್ಟಾಗಿ ಕೆಲಸ ಮಾಡಿಕೊಂಡು ಮುನ್ನಡೆಯುತ್ತೇವೆ. ಎಲ್ಲರಿಗೂ ವೈಯಕ್ತಿಕ ಅಭಿಪ್ರಾಯ ಇದ್ದೇ ಇರುತ್ತದೆ. ಆದರೆ ಪಕ್ಷದ ವಿಚಾರಕ್ಕೆ ಬಂದಾಗ ಅಲ್ಲಿ ಒಮ್ಮತವೇ ಎಲ್ಲ.

5. ಪಕ್ಷದ ನೀಡಿರುವ ವಿವಿಧ ಹೊಣೆಗಾರಿಕೆಗಳನ್ನು ನಿಭಾಯಿಸಿದ್ದೇನೆ. ಟಾಸ್ಕ್‌ಗಳನ್ನು ನಿರ್ವಹಿಸಿದ್ದೇನೆ. ಈಗ ಹೊಸ ಟಾಸ್ಕ್ ಮುಂದೆ ಇದೆ. ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬೇಕು. ಲೋಕಸಭೆ ಚುನಾವಣೆಯಲ್ಲಿ 28 ಸ್ಥಾನ ಗೆಲ್ಲಬೇಕು. ಅದರ ಕಡೆಗೆ ಗಮನಹರಿಸೋಣ.

ಸಭೆಗೆ ಗೈರಾದವರು ಮತ್ತು ಹೊರ ನಡೆದವರು

ವಿಪಕ್ಷ ನಾಯಕ ಮತ್ತು ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಶುರುವಾದ ಕೂಡಲೇ ಅಲ್ಲಿ ಹಾಜರಾಗದೇ ಇದ್ದವರ ಪೈಕಿ ಹಿರಿಯ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್‌, ಅರವಿಂದ ಬೆಲ್ಲದ್, ರಮೇಶ್ ಜಾರಕಿಹೊಳಿ, ಎಸ್‌.ಟಿ.ಸೋಮಶೇಖರ್‌, ಶಿವರಾಮ ಹೆಬ್ಬಾರ್ ಕೂಡ ಗಮನಸೆಳೆದಿದ್ದಾರೆ.

Related Articles

Back to top button
error: Content is protected !!