ಇತರೆ

ವಿವಾಹಿತೆ ಸಾವು: ಸಂಶಯ ವ್ಯಕ್ತಪಡಿಸಿ ದೂರು 

Views: 13

ಕನ್ನಡ ಕರಾವಳಿ ಸುದ್ದಿ: ಹೊನ್ನಾವರ ತಾಲೂಕಿನ ದೊಡ್ಡಗುಂಡ ಗ್ರಾಮದಲ್ಲಿ ವಿವಾಹಿತೆ ಸಂಶಯಾಸ್ಪದವಾಗಿ ಮೃತಪಟ್ಟ ಘಟನೆ ಬುಧವಾರ ನಡೆದಿದೆ.

ಮೃತಳ ಸಾವಿನ ಕುರಿತು ಸಂಶಯ ವ್ಯಕ್ತಪಡಿಸಿ ಕುಟುಂಬಸ್ಥರು ದೂರು ನೀಡಿರುವ ಹಿನ್ನೆಲೆಯಲ್ಲಿ ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ತನಿಖೆ ಆರಂಭಿಸಿದ್ದಾರೆ.

ದೊಡ್ಡಗುಂಡದ ಮಂಗಳಾ ಗಣಪತಿ ನಾಯ್ಕ (27) ಮರಣಹೊಂದಿದ ವಿವಾಹಿತೆ . ಮಂಗಳಾ ಅವರಿಗೆ ವಿವಾಹವಾಗಿ ಐದು ವರ್ಷಗಳಾಗಿದ್ದು, ಅವರ ಸಾವಿನ ಹಿಂದೆ ಯಾವುದೋ ಕಾರಣವಿರಬಹುದು ಎಂಬ ಅನುಮಾನವಿದೆ ಎಂದು ಮೃತಳ ಅಕ್ಕ, ದಾಂಡೇಲಿಯ ಲಲಿತಾ ಸಚಿನ್ ಗುಂಜಿಕರ್ ಅವರು ಮಂಕಿ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಾವಿನ ನಿಖರ ಕಾರಣದ ಕುರಿತು ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾರವಾರ ಮೆಡಿಕಲ್ ಅಧೀನ ಆಸ್ಪತ್ರೆಗೆ ಕಳುಹಿಸಲಾಗಿದೆ.

Related Articles

Back to top button
error: Content is protected !!