ವಿವಾಹಿತ ಪ್ರಿಯತಮೆ ಕೊಂದ ಪ್ರಿಯಕರ: ಪುಟ್ಟ ಮಕ್ಕಳಿಬ್ಬರು ಅನಾಥ
Views: 26
ಕನ್ನಡ ಕರಾವಳಿ ಸುದ್ದಿ: ಚಾಕುವಿನಿಂದ ಇರಿದು ವಿವಾಹಿತ ಪ್ರಿಯತಮೆಯನ್ನು ಪ್ರಿಯಕರ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಆದರೆ ಆಕೆಯ ಇಬ್ಬರು ಮಕ್ಕಳು ಈಗ ಅನಾಥರಾಗಿದ್ದು ಮನಕಲಕುವ ಘಟನೆಗೆ ಸಾಕ್ಷಿಯಾಗಿದೆ.
ಚಿಕ್ಕಬಳ್ಳಾಪುರ ನಗರದ ತೇಜಸ್ವಿನಿ ಎಂಬಾಕೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಂಡನನ್ನು ಬಿಟ್ಟು ತನ್ನಿಬ್ಬರು ಪುಟ್ಟ ಮಕ್ಕಳೊಂದಿಗೆ ಏಕಾಂಗಿಯಾಗಿ ಜೀವನ ನಡೆಸುತ್ತಿದ್ದಳು. ಹೋಟೆಲ್ ವೊಂದರಲ್ಲಿ ಕೆಲಸ ಮಾಡಿಕೊಂಡು ಹೋಟೆಲ್ ನವರೇ ಕೊಟ್ಟಿದ್ದ 1 ರೂಮಿನಲ್ಲಿ ಮಕ್ಕಳನ್ನು ಸಾಕಿ ಸಲುಹಿಕೊಂಡು ಜೀವನ ದೂಡುತ್ತಿದ್ದಳು. ಆದ್ರೆ ಅಲ್ಲಿ ಆಕೆಗೆ ಪರಿಚಯವಾದ ಸಂದೀಪ್ ಎಂಬ ಯುವಕನೊರ್ವ ಆಕೆಯ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದಾನೆ. ಅವರಿಬ್ಬರ ನಡುವೆ ನಡೆದ ಜಗಳದಲ್ಲಿ ಆಕೆ ಕೊಲೆಯಾಗಿ ಹೋಗಿದ್ದಾಳೆ.ಇದರಿಂದ ಲೋಕದ ಅರಿವೇ ಇಲ್ಲದ ಆಕೆಯ ಇಬ್ಬರು ಪುಟ್ಟ ಮಕ್ಕಳು ಅನಾಥರಾಗಿದ್ದಾರೆ. 10 ವರ್ಷದ ಬಾಲಕ ಮಗು ಅಮ್ಮ ಸತ್ತಿರೋ ವಿಷಯ ತಿಳಿದು ಸಂಬಂಧಿಕರ ಮರೆಯಲ್ಲಿ ಬಿಕ್ಕಿ ಅಳುತ್ತಿದ್ದಾನೆ ಈ ದೃಶ್ಯಗಳು ಕಟುಕರ ಕಣ್ಣಲ್ಲೂ ನೀರು ತರಿಸುವಂತಿದೆ.






