ಸಾಮಾಜಿಕ

ವಿವಾಹಿತ ಮಹಿಳೆ ಆತ್ಮಹತ್ಯೆ, ವರದಕ್ಷಿಣೆ ಕಿರುಕುಳ ಆರೋಪಿಸಿ..ಪತಿ, ಅತ್ತೆ, ಮಾವ ವಶಕ್ಕೆ

Views: 141

ಮೂಡಿಗೆರೆ : ವಿವಾಹಿತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದೆ.

ಮೂಡಿಗೆರೆ ತಾಲ್ಲೂಕಿನ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಾವಿನಕೂಡಿಗೆ ಗ್ರಾಮದಲ್ಲಿ ಸೋಮವಾರ ಈ ಘಟನೆ ನಡೆದಿದೆ.

ವಿವಾಹಿತ ಮಹಿಳೆ ಸುಬೀಕ್ಷಾ (26 ವರ್ಷ) ತನ್ನ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದು, ಈ ಸಾವಿನ ಬಗ್ಗೆ ಆಕೆಯ ತವರು ಮನೆಯವರು ಅನುಮಾನ ವ್ಯಕ್ತಪಡಿಸಿ ಬಾಳೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮೃತ ಸುಭೀಕ್ಷಾ ತಂದೆ ಚಿನ್ನೇಗೌಡ ತನ್ನ ಮಗಳಿಗೆ ಪತಿ, ಮಾವ ಮತ್ತು ಅತ್ತೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು, ತನ್ನ ಮಗಳ ಸಾವಿನ ಬಗ್ಗೆ ಅನುಮಾನವಿದ್ದು ತಪ್ಪಿತಸ್ತರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ ಬಾಳೂರು ಪೊಲೀಸರು ಮೃತ ಸುಭೀಕ್ಷಾ ಪತಿ ಎಂ.ಸಿ.ಪ್ರವೀಣ, ಮಾವ ಚಂದ್ರೇಗೌಡ ಅತ್ತೆ ಲಕ್ಷ್ಮೀ ವಿರುದ್ಧ ಪ್ರಕರಣ ದಾಖಲಿಸಿ ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.

Related Articles

Back to top button
error: Content is protected !!