ಶಿಕ್ಷಣ
ವಿವಿಧ ಬೇಡಿಕೆ ಅಗ್ರಹಿಸಿ ಪದವಿ ತರಗತಿ ಬಹಿಷ್ಕಾರಕ್ಕೆ ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರು ಹೋರಾಟಕ್ಕೆ ಬೆಂಬಲ

Views: 1
ಬೈಂದೂರು: ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ರಾಜ್ಯ ವ್ಯಾಪಿ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದು, ಇದನ್ನು ಬೆಂಬಲಿಸಿ ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ, ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.
ಡಿ.6ರಂದು ಹೋರಾಟದಲ್ಲಿ ಪಾಲ್ಗೊಳ್ಳುತ್ತಿದ್ದೇವೆ ಎಂದು ಕಾಲೇಜಿನ ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದರು.
ಹಿರಿಯ ಅತಿಥಿ ಉಪನ್ಯಾಸಕರಾದ ಡಾ.ರವಿಚಂದ್ರ, ಮಣಿಕಂಠ, ಪ್ರದೀಪ್,ಜಲಕನ್ಯಾ, ಜ್ಯೋತಿ,ವಿಘ್ನೇಶ್ ಇನ್ನಿತರರು ಉಪಸ್ಥಿತರಿದ್ದರು.