ಇತರೆ

ವಿಷಪೂರಿತ ಮಾಂಸದೂಟ ಸೇವನೆ ಒಂದೇ ಕುಟುಂಬದ ನಾಲ್ವರ ಸಾವು, ಆತ್ಮಹತ್ಯೆ ಸಾಧ್ಯತೆಯ ಬಗ್ಗೆಯೂ ತನಿಖೆ..!

Views: 184

ರಾಯಚೂರು,  ಮಾಂಸದ ಊಟದ ಜೊತೆ ವಿಷ ಬೆರೆತ ಮಾಡಿ ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿ ಇನ್ನೊಬ್ಬ ಮಗಳ ಸ್ಥಿತಿ ಚಿಂತಾ ಜನಕವಾಗಿರುವ ದಾರುಣ ಘಟನೆ ಜಿಲ್ಲೆಯ ಸಿರವಾರ ತಾಲೂಕಿನಲ್ಲಿ ನಡೆದಿದೆ.

ಸಿರವಾರ ತಾಲ್ಲೂಕಿನ ಕಲ್ಲೂರು ಗ್ರಾಮದ ಈ ಭೀಮಣ್ಣ (60), ಭೀಮಣ್ಣನ ಪತ್ನಿ ಈರಮ್ಮ (54), ಭೀಮಣ್ಣನ ಮಗ ಮಲ್ಲೇಶ್ (19), ಮಗಳು ಪಾರ್ವತಿ (17) ಸಾವಿಗೀಡಾದವರು.ಮತ್ತೊಬ್ಬ ಮಗಳು ಮಲ್ಲಮ್ಮ (18) ಎಂಬಾಕೆಯ ಸ್ಥಿತಿ ಗಂಭೀರವಾಗಿದೆ.

ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.ವಿಷ ಆಹಾರದಿಂದ ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಆದರೆ ಆತ್ಮಹತ್ಯೆ ಸಾಧ್ಯತೆಯ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.

ಇಡೀ ವಿಷಪೂರಿತ ಸೇವನೆಯಿಂದ ಆಗಿಲ್ಲ ಕುಟುಂಬ ಮಾಂಸ ಕೊಂಡು ತಂದು ಅಡುಗೆ ಮಾಡಿ ಜೊತೆಯಾಗಿ ಊಟ ಮಾಡಿತ್ತು. ಅಡುಗೆ ಮಾಡುವ ವೇಳೆ ಅಡುಗೆಯಲ್ಲಿ ಹಲ್ಲಿ ಬಿದ್ದಿರಬಹುದು ಎಂಬ ಶಂಕೆಯಿದೆ. ಸ್ಥಳಕ್ಕೆ ಸಿರವಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.

ಇದು ಫುಡ್ ಪಾಯ್ಸನ್ ಅಲ್ಲ, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದೂ ಕೆಲವರು ತರ್ಕಿಸಿದ್ದಾರೆ. ಎಂಎಲ್‌ಸಿ ವರದಿ ಆಧರಿಸಿ ಫುಡ್ ಪಾಯ್ಸನ್ ಅಂತ ಪ್ರಾಥಮಿಕ ತನಿಖೆಗೆ ಪೊಲೀಸರು ಮುಂದಾಗಿದ್ದಾರೆ. ಆತ್ಮಹತ್ಯೆ ಆರೋಪದ ಹಿನ್ನೆಲೆಯಲ್ಲಿ ಆ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಘಟನೆಯ ಕುರಿತಂತೆ ಮಾತನಾಡಿರುವ ಜಿಲ್ಲಾಧಿಕಾರಿ ನಿತೀಶ್ ಅವರು ಆಹಾರದೊಂದಿಗೆ ಕೀಟನಾಶಕ ಮಿಶ್ರಣವಾಗಿರುವ ಸಂಭವವಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.ನಿನ್ನೆ ಕುಟುಂಬದ ಮುಖ್ಯಸ್ಥ ಭೀಮಣ್ಣ ಈ ಊಟ ಸೇವನೆಯಿಂದ ರಕ್ತದೊತ್ತಡ ಕಡಿಮೆಯಾಗಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರ ಪತ್ನಿ, ಓರ್ವ ಮಗ ಮತ್ತೊಬ್ಬ ಪುತ್ರಿಯನ್ನು ರಿಮ್ಸ್‌ಗೆ ದಾಖಲಿಸಲಾಗಿತ್ತು. ಮೇಲ್ನೋಟಕ್ಕೆ ಆಹಾರದಲ್ಲಿ ಕ್ರಿಮಿನಾಶಕ ಅಲ್ಯೂಮೀನಿಯಂ ಪಾಸ್ಪ್ರೆಟ್ ಮಿಶ್ರಣವಾಗಿರುವ ಸಾಧ್ಯತೆ ಇದೆ. ಏಕೆಂದರೆ ಸಾವು ಸಂಭವಿಸಿದವರಲ್ಲಿ ಹಠಾತ್ ರಕ್ತದೊತ್ತಡ ಕಡಿಮೆಯಾಗಿರುವುದು ಹೈಪೋಗ್ಲೈಸೀಮಿಯಾ ಮತ್ತು ಲಿವರ್ ಕಾರ್ಯಾಚರಣೆ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿರುವುದು ಅಲ್ಯೂಮೀನಿಯಂ ಪಾಸ್ಪ್ರೆಟ್ ಸೇವಿಸಿದವರಲ್ಲಿ ಪ್ರಮುಖವಾಗಿ ಕಂಡು ಬರುವ ಲಕ್ಷಣಗಳಾಗಿವೆ.ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಈಗಾಗಲೇ ಶವಗಳನ್ನು ಶವ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ.ವರದಿ ಬಂದ ನಂತರವಷ್ಟೆ ಸಾವಿಗೆ ನಿರ್ದಿಷ್ಟ ಕಾರಣ ಏನು ಎಂಬುದು ತಿಳಿಯಲಿದೆ.ಸದ್ಯ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಭೀಮಣ್ಣ ಅವರ ಮತ್ತೊಬ್ಬ ಪುತ್ರಿಗೆ ಚಿಕಿತ್ಸೆಗೆ ಮುಂದುವರೆಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಿಇಓ ತುಕಾರಾಂ ರಾಥೂರ್, ರಿಮ್ಸ್‌ನ ನಿರ್ದೇಶಕ ರಮೇಶ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುರೇಂದ್ರಬಾಬು ಇತರರು ಇದ್ದರು.

Related Articles

Back to top button
error: Content is protected !!