ಯುವಜನ
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸಮುದಾಯ ಆರೋಗ್ಯಾಧಿಕಾರಿ ಸಾವು
Views: 148
ಕನ್ನಡ ಕರಾವಳಿ ಸುದ್ದಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಕಳೆದ 27 ದಿನಗಳಿಂದ ಜೀವನ್ಮರಣ ಸ್ಥಿತಿಯಲ್ಲಿ ಹೋರಾಟದಲ್ಲಿದ್ದ ಯುವತಿಯೋರ್ವರು ಮೃತಪಟ್ಟ ಘಟನೆ ಬೆಟ್ಟಂಪಾಡಿ ಗ್ರಾಮದ ಮಿತ್ತಡ್ಕದಲ್ಲಿ ನಡೆದಿದೆ.
ಬೆಟ್ಟಂಪಾಡಿ ಗ್ರಾಮದ ಮಿತ್ತಡ್ಕದಿ | ಹೆಗ್ಗಡೇಶ ಗೌಡ ಅವರ ಪುತ್ರಿ ಪ್ರಜ್ಞಾ (26) ಮೃತಪಟ್ಟವರು.
ಆರೋಗ್ಯ ಇಲಾಖೆಯಲ್ಲಿ ಬಡಗನ್ನೂರು ಸಮುದಾಯ ಗ್ರಾ.ಪಂ. ವ್ಯಾಪ್ತಿಯ ಆರೋಗ್ಯಾಧಿಕಾರಿಯಾಗಿದ್ದ ಪ್ರಜ್ಞಾ ಅವರು ಜೂ.21ರಂದು ಮನೆಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.
ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಅಲ್ಲಿ ಕಳೆದ 27 ದಿನಗಳಿಂದ ಜೀವನ್ಮರಣ ಸ್ಥಿತಿಯಲ್ಲಿ ಹೋರಾಟ ಮಾಡುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ತಾಯಿ ಹಾಗೂ ಸಹೋದರಿಯನ್ನು ಆಗಲಿದ್ದಾರೆ.






