ಯುವಜನ

ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

Views: 434

ಕನ್ನಡ ಕರಾವಳಿ ಸುದ್ದಿ: ವಿಷ ಸೇವಿಸಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಸಾವಿಗೆ ಶರಣಾದ ಘಟನೆ ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದಿದೆ.

ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪ್ರಿಯಾಂಕಾ ಡಿ’ಸೋಜ(19) ಆತ್ಮಹತ್ಯೆ ಮಾಡಿಕೊಂಡ ಕಾಲೇಜು ವಿದ್ಯಾರ್ಥಿನಿ

ಎಂಟು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಪ್ರಿಯಾಂಕ ಆತ್ಮಹತ್ಯೆಗೆ ಯತ್ನಿಸಿದ್ದಳು. ಇದರಿಂದ ಗಂಭೀರ ಸ್ಥಿತಿಯಲ್ಲಿದ್ದ ಪ್ರಿಯಾಂಕಳನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.

ವಿಷ ಪದಾರ್ಥ ಸೇವಿಸಲು ಕಾರಣವೇನೆಂದು ಇನ್ನೂ ಸ್ಪಷ್ಟವಾಗಿಲ್ಲ. ಮೃತ ಪ್ರಿಯಾಂಕ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಸಿ ಕಲಿಗೆಯ ವಿದ್ಯಾರ್ಥಿನಿಯಾಗಿದ್ದರು. ಸ್ಥಳಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಸಲಾಗುತ್ತಿದೆ.

ಮೃತಳ ಸಹೋದರಿ ನೀಡಿದ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಅಸಹಜ ಸಾವು ಎಂದು ಪ್ರಕರಣ ದಾಖಲಾಗಿದೆ. ಪ್ರಿಯಾಂಕ ಸಾವಿನ ಹಿನ್ನೆಯಲ್ಲಿಂದು ಕಾಲೇಜಿಗೆ ರಜೆ ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.

Related Articles

Back to top button
error: Content is protected !!