ರಾಜಕೀಯ
ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ನಿಧನ

Views: 203
ಬೆಂಗಳೂರು: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪುತ್ರಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ.
46 ವರ್ಷದ ಹಂಸ ಮೊಯ್ಲಿ ಅವರು ಇತ್ತೀಚೆಗೆ ಅಸೌಖ್ಯದಿಂದ ಬಳಲುತ್ತಿದ್ದರು. ಭರತನಾಟ್ಯ ನೃತ್ಯಗಾರ್ತಿ ಮತ್ತು ಪ್ರಾಯೋಗಿಕ ನೃತ್ಯ ಸಂಯೋಜಕಿಯಾಗಿದ್ದರು. ದೇವದಾಸಿಯರ ಜೀವನವನ್ನು ಆಧರಿಸಿದ ತಮಿಳು ಸಿನಿಮಾʻ ಶೃಂಗಾರಂʼನಲ್ಲಿ ನಟಿಸಿದ್ದರು.
ಅನಾರೋಗ್ಯದಿಂದಾಗಿ ಏಕಾಏಕಿ ಬಳಲಿದ್ದ ಅವರು, ನಿನ್ನೆ ಸಂಜೆ ಅಸ್ವಸ್ಥರಾಗಿದ್ದರು. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವೀರಪ್ಪಮೊಯ್ಲಿ ಅವರ ಮೂರನೇ ಪುತ್ರಿಯಾಗಿದ್ದ ಹಂಸ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.






