ಜನಮನ
ವೈದ್ಯರು ಪರೀಕ್ಷೆ ನಡೆಸಿ ಮೃತಪಟ್ಟು ಘೋಷಣೆ ಮಾಡಿದ ನಂತರ ಕಣ್ಣು ತೆರೆದ ಬಿಜೆಪಿ ನಾಯಕ

Views: 0
ಆರೋಗ್ಯದಲ್ಲಿ ಏರುಪೇರಾಗಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಫಲಕಾರಿಯಾಗದೆ ಮೃತಪಟ್ಟರೆಂದು ವೈದ್ಯರು ಘೋಷಿಸಿದ ನಂತರ ಅಂತ್ಯಕ್ರಿಯೆ ತಯಾರಿ ನಡೆಸುತ್ತಿದ್ದ ವೇಳೆ ಮೃತ ವ್ಯಕ್ತಿ ಕಣ್ಣು ಬಿಟ್ಟ ಘಟನೆ ಆಗ್ರಾದಲ್ಲಿ ನಡೆದಿದೆ.
ಆಗ್ರಾದ ಬಿಜೆಪಿ ಮಾಜಿ ಅಧ್ಯಕ್ಷ ಮಹೇಶ್ ಬಾಘೋಲ್ (65) ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆಂದು ಘೋಷಿಸಿದ ವ್ಯಕ್ತಿ,
ಬಿಜೆಪಿ ನಾಯಕ ಮಹೇಶ್ ಬಾಘೋಲ್ ಅವರ ಆರೋಗ್ಯವು ಹದಗೆಟ್ಟಿದ್ದರಿಂದ ಮನೆಯವರು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರತಲಾಯಿತು. ಆಸ್ಪತ್ರೆಯ ವೈದ್ಯರು ಪರೀಕ್ಷೆ ನಡೆಸಿ. ಅವರು ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.
ವೈದ್ಯರ ಹೇಳಿಕೆ ಮೇರೆಗೆ ಮೃತದೇಹವನ್ನು ಮನೆಗೆ ತಂದು ಅಂತ್ಯಕ್ರಿಯೆಗೆ ತಯಾರಿ ನಡೆಸುತ್ತಿದ್ದ ವೇಳೆ ಅವರು ಕಣ್ಣು ಬಿಟ್ಟಿದ್ದಾರೆ.
ಇದನ್ನು ಕಂಡ ಅಲ್ಲಿದ್ದ ಕುಟುಂಬ ವರ್ಗಕ್ಕೆ ಆಶ್ಚರ್ಯ ಉಂಟಾಗಿದೆ. ಬಳಿಕ ಮತ್ತೆ ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಯಿತು.






