ಶಿಕ್ಷಣ

ಶಂಕರನಾರಾಯಣ ಮದರ್ ತೆರೆಸಾ ಪ.ಪೂ ಕಾಲೇಜು:ದ್ವಿತೀಯ ಪಿಯುಸಿ ಶೇ.100 ಫಲಿತಾಂಶ 

Views: 520

ಕುಂದಾಪುರ:ಶಂಕರನಾರಾಯಣ ಮದರ್ ತೆರೆಸಾ ಪದವಿ ಪೂರ್ವ ವಿದ್ಯಾರ್ಥಿಗಳು 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ಎರಡು ವಿಭಾಗಗಳಲ್ಲಿ ಶೇಕಡಾ 100 ಫಲಿತಾಂಶ ಪಡೆಯುವ ಮೂಲಕ ಮತ್ತೊಮ್ಮೆ ಉತ್ತಮ ಫಲಿತಾಂಶವನ್ನು ದಾಖಲಿಸಿದೆ

ವಾಣಿಜ್ಯ ವಿಭಾಗದ ಒಟ್ಟು 50 ವಿದ್ಯಾರ್ಥಿಗಳಲ್ಲಿ 33 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಿಜ್ಞಾನ ವಿಭಾಗದ 86 ವಿದ್ಯಾರ್ಥಿಗಳಲ್ಲಿ 59 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 27 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.ವಾಣಿಜ್ಯ ವಿಭಾಗದಲ್ಲಿ 588 ಅಂಕಗಳನ್ನು ಗಳಿಸುವ ಮೂಲಕ ಸಾತ್ವಿಕ್ ವಿ ಶೆಟ್ಟಿ ರಾಜ್ಯಕ್ಕೆ ಹತ್ತನೇ ಸ್ಥಾನವನ್ನು ಮತ್ತು ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. 581 ಅಂಕಗಳನ್ನು ಗಳಿಸುವ ಮೂಲಕ ಅನನ್ಯ ಶೆಟ್ಟಿ ಹಾಗೂ ಆಯೇಷ ಸಮನ್ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಉತ್ತಮ ಸಾಧನೆಗೈದ ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

Related Articles

Back to top button