Views: 121
ಕನ್ನಡ ಕರಾವಳಿ ಸುದ್ದಿ: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಶೈಕ್ಷಣಿಕ ವರ್ಷ 2025-26 ಸಾಲಿನ BA , BCom, BBA (CA CS) ಪದವಿಗಾಗಿ ದ್ವೀತಿಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ವೇತನ ಪರೀಕ್ಷೆ ಕಾಲೇಜಿನಲ್ಲಿ ದಿನಾಂಕ 22-3-2025 ರಂದು ನಡೆಯಲಿದೆ.
ಶ್ರೀ ಶಾರದಾ ಕಾಲೇಜು ಟ್ರಸ್ಟ್ ವತಿಯಿಂದ ಕಾಲೇಜು ಆರಂಭಗೊಂಡು 52 ವರ್ಷ ಪೂರೈಸಿದ್ದು ಕಾಲೇಜು ಆರಂಭದಿಂದಲೂ ಗ್ರಾಮೀಣ ಪ್ರದೇಶದ ಹಿಂದುಳಿದ ಬಡ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ತಾಲೂಕಿನಲ್ಲಿ ಹೆಸರಾಗಿದ್ದು ಮುಂದಿನ ಶೈಕ್ಷಣಿಕ ವರ್ಷದಿಂದ ಮಂಗಳೂರು ವಿಶ್ವವಿದ್ಯಾಲಯದಿಂದ ಉದ್ಯೋಗ ಆಧಾರಿತ ಕೋರ್ಸುಗಳನ್ನು ಆರಂಭಿಸಲಿದೆ.
ಸಂಸ್ಥೆಯು ಮುಂದಿನ ಶೈಕ್ಷಣಿಕ ವರ್ಷಕ್ಕೆ ದಾಖಲಾತಿ ಪ್ರಕ್ರಿಯೆ ಆರಂಭಿಸಿದ್ದು ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿದ್ಯಾರ್ಥಿವೇತನ ಪರೀಕ್ಷೆ ಕಾಲೇಜಿನಲ್ಲಿ ನಡೆಯಲಿದ್ದು ದ್ದೀತಿಯ ಪಿಯುಸಿ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ 9972254172, 9686426249, ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ ಚಂದ್ರಾವತಿ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.