ಆರೋಗ್ಯ
ಶಾರದಾ ಪದವಿ ಪೂರ್ವ ಕಾಲೇಜು ಬಸ್ರೂರು: ಮಾದಕ ವ್ಯಸನ ವಿರೋಧಿ ದಿನಾಚರಣೆ

Views: 52
ಕನ್ನಡ ಕರಾವಳಿ ಸುದ್ದಿ: ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಬಸ್ರೂರು ಇಲ್ಲಿ ಅಂತಾರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ದಿನಾಚರಣೆಯನ್ನು ನಶಾಮುಕ್ತ ಭಾರತ ಕಾರ್ಯಕ್ರಮದಡಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕುಂದಾಪುರ ಗ್ರಾಮಾಂತರ ಠಾಣೆ ಕಂಡ್ಲೂರಿನ ಎ.ಎಸ್.ಐ ಶಂಕರ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ನೀಡಿದರು.
ಉಪನ್ಯಾಸಕಿ ಪ್ರತಿಮಾ ಸ್ವಾಗತಿಸಿದರು. ಉಪನ್ಯಾಸಕಿ ಶರಾವತಿ ವಂದಿಸಿದರು. ಉಪನ್ಯಾಸಕಿ ಶ್ರೀಲತಾ ಅವರು ನಶಾಮುಕ್ತ ಪ್ರತಿಜ್ಞಾ ವಿಧಿ ಭೋಧಿಸಿದರು.ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾರಾಯಣ ಪೈ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಎನ್.ಎಸ್.ಎಸ್ ಅಧಿಕಾರಿ ಅಕ್ಷಯ ಹೆಗ್ಡೆ ಮೊಳಹಳ್ಳಿ ಕಾರ್ಯಕ್ರಮ ನಿರೂಪಿಸಿದರು.