ಶಿಕ್ಷಣ
ಶಾಲಾ ಕರ್ತವ್ಯದಲ್ಲಿರುವಾಗಲೇ ಮುಖ್ಯ ಶಿಕ್ಷಕ ಹೃದಯಾಘಾತದಿಂದ ಸಾವು
Views: 60
ಕನ್ನಡ ಕರಾವಳಿ ಸುದ್ದಿ : ಶಾಲೆಯಲ್ಲಿ ಕರ್ತವ್ಯದಲ್ಲಿರುವಾಗಲೇ ಮುಖ್ಯ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ ಲಂಜವಾಡ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ತಾಲೂಕಿನ ಬಾಜೋಳಗಾ ಗ್ರಾಮದ ನಿವಾಸಿ, ಲಂಜವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸೂರ್ಯಕಾಂತ ಅಮದಾಬಾದೆ ಎಂದು ಗುರುತಿಸಲಾಗಿದೆ.
ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಬಾಜೋಳಗಾದಲ್ಲಿ ಶನಿವಾರ ಈ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.






