ಶಿಕ್ಷಣ
ಶಾಲಾ ಕಾಲೇಜುಗಳಲ್ಲಿ “ಸಂವಿಧಾನದ ಪೀಠಿಕೆ ” ಓದು ಕಡ್ಡಾಯಗೊಳಿಸಿದ ಸರಕಾರ

Views: 81
ಸರಕಾರಿ ಅನುದಾನಿತ ಖಾಸಗಿ ಸೇರಿದಂತೆ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಪ್ರತಿದಿನ ಕಡ್ಡಾಯವಾಗಿ ಓದಬೇಕು. ಮತ್ತು ಎಲ್ಲಾ ಸರಕಾರಿ ಕಚೇರಿ ಇಲಾಖೆಗಳಲ್ಲಿ ಸಂವಿಧಾನದ ಪೀಠಿಕೆಯ ಫೋಟೋ ಹಾಕಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಸ್ವಾತಂತ್ರ್ಯ ಹೋರಾಟ ಸಂವಿಧಾನದ ಹಿಂದಿನ ಕಲ್ಪನೆಯನ್ನು ಗಮನದಲ್ಲಿಟ್ಟುಕೊಂಡು ಜನರು ವಿಶೇಷವಾಗಿ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಓದಬೇಕು ಎಂದು ಸಚಿವ ಸಂಪುಟದ ಸಭೆ ಬಳಿಕ ಸಮಾಜ ಕಲ್ಯಾಣ ಸಚಿವ ಎಚ್.ಸಿ ಮಹದೇವಪ್ಪ ಹೇಳಿದ್ದಾರೆ.
ಯುವಜನರನ್ನು ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಲು ಮತ್ತು ಎಲ್ಲಾ ಸಮುದಾಯಗಳ ನಡುವೆ ಸಹೋದರತ್ವವನ್ನು ಉತ್ತೇಜಿಸಲು ಪ್ರೇರೇಪಿಸುತ್ತದೆ. ಇಂತಹ ಶ್ರೇಷ್ಠ ಸಂವಿಧಾನವನ್ನು ಹೊಂದಿರುವ ನಮ್ಮ ಯುವಕರು ಕಡ್ಡಾಯ ಓದಬೇಕು. ಸಂವಿದಾನದ ರಚನಾ ಮೂಲ ಉದ್ದೇಶಗಳನ್ನು ತಿಳಿಯಲು ಹಾಗೂ ಎಲ್ಲಾ ಜಾತಿ ಧರ್ಮಗಳನ್ನು ಸಮಾನವಾಗಿ ಕಾಣಲು ಸಾಧ್ಯ ಎಂದು ಸಚಿವ ಸಂಪುಟ ನಿರ್ಧರಿಸಿದೆ.