ಶಾಲಾ ಬಸ್ ಪಲ್ಟಿ, 6 ಮಕ್ಕಳು ಸಾವು, 20ಕ್ಕೂ ಹಚ್ಚು ವಿದ್ಯಾರ್ಥಿಗಳಿಗೆ ಗಾಯ!

Views: 200
ಶಾಲಾ ಬಸ್ ಓವರ್ ಟೇಕ್ ಮಾಡಲು ಹೋಗಿ ನಿಯಂತ್ರಣಕ್ಕೆ ಕಳೆದುಕೊಂಡ ಬಸ್ ಪಲ್ಟಿಯಾದ ಪರಿಣಾಮ. ಜಿಎಲ್ ಪಬ್ಲಿಕ್ ಸ್ಕೂಲಿನ 6 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ, 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಹರ್ಯಾಣದ ಮಹೇಂದ್ರಘಡದಲ್ಲಿ ನಡೆದಿದೆ.
ವೇಗವಾಗಿ ಚಲಿಸಿದ ಬಸ್ ಓವರ್ ಟೇಕ್ ಮಾಡುತ್ತಿದ್ದಂತೆ ನಿಯಂತ್ರಣ ತಪ್ಪಿದೆ. ಪರಿಣಾಮ ಬಸ್ ಪಲ್ಟಿಯಾಗಿದೆ. ಅತೀ ವೇಗದ ಪರಿಣಾಮ ಬಸ್ ಪಲ್ಟಿಯಾಗಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಶಾಲೆಗೆ ತೆರಳಿದ್ದ ಮಕಳ ಪೈಕಿ 5 ವಿದ್ಯಾರ್ಥಿಗಳು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಮತ್ತೊರ್ವ ವಿದ್ಯಾರ್ಥಿ ಆಸ್ಪತ್ರೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾನೆ. ಇತ್ತ 20 ಮಕ್ಕಳು ಗಾಯಗೊಂಡಿರುವುದಾಗಿ ವರದಿಯಾಗಿದೆ. ಎಲ್ಲಾ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಹಿಸ್ಸಾರ್ ಸೂಪರಿಡೆಂಟ್ ಆಫ್ ಪೊಲೀಸ್ ಅರ್ಶ್ ವರ್ಮಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಬಸ್ ಚಾಲಕನ ವಶಕ್ಕೆ ಪಡೆದಿರುವ ಪೊಲೀಸರು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಶಿಕ್ಷಣ ಸಚಿವೆ ಸೀಮಾ ತ್ರಿಖಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಗಾಯಗೊಂಡಿರುವ ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ವ್ಯವಸ್ಥೆ ಮಾಡುವಂತೆ ಸ್ಥಳೀಯ ಜಿಲ್ಲಾಡಳಿತಕ್ಕೆ ಸೂಚೆನೆ ನೀಡಲಾಗಿದೆ.