ಯುವಜನ
ಶಾಲೆಗೆ ಹೋಗಿದ್ದ ಇಬ್ಬರು SSLC ವಿದ್ಯಾರ್ಥಿನಿಯರು ಇದ್ದಕ್ಕಿದ್ದಂತೆ ನಾಪತ್ತೆ
Views: 57
ಕನ್ನಡ ಕರಾವಳಿ ಸುದ್ದಿ: ಶಾಲೆಗೆ ಹೋಗಿದ್ದ ಇಬ್ಬರು ವಿದ್ಯಾರ್ಥಿನಿಯರು ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ
ಕೋಲಾರದ ನರಸಾಪುರ ಗ್ರಾಮದ ಶರಣ್ಯಾ ಹಾಗೂ ದೇವಿ ನಾಪತ್ತೆಯಾಗಿರುವ ವಿದ್ಯಾರ್ಥಿನಿಯರು. ನಿನ್ನೆ ಬೆಳಿಗ್ಗೆ ಶಾಲೆಗೆ ಹೋಗಿದ್ದ ವಿದ್ಯಾರ್ಥಿನಿಯರು ಇಂದು ಸಂಜೆಯಾದರೂ ಮನೆಗೆ ವಾಪಾಸ್ ಆಗಿಲ್ಲ. ಅತ್ತ ಶಾಲೆಗೆ ಹೋಗಿಲ್ಲ ಎಂದು ತಿಳಿದುಬಂದಿದೆ.
ಇಬ್ಬರು ವಿದ್ಯಾರ್ಥಿನಿಯರು ಹತ್ತನೇ ತರಗತಿ ಓದುತ್ತಿದ್ದರು. ಆತಂಕಗೊಂಡಿರುವ ಪೋಷಕರು ಕೋಲಾರ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿದ್ಯಾರ್ಥಿನಿಯರ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.






