ಶಿಕ್ಷಣ

ಶಾಲೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ 7ನೇ ತರಗತಿ ವಿದ್ಯಾರ್ಥಿ

Views: 167

ಕನ್ನಡ ಕರಾವಳಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಒಂದೆಡೆ ಹೃದಯಾಘಾತಕ್ಕೆ ಸಣ್ಣ ವಯಸ್ಸಿನವರೂ ಬಲಿಯಾಗುತ್ತಿರುವ ಸಂಖ್ಯೆ ಹೆಚ್ಚುತ್ತಿದೆ. ಮತ್ತೊಂದೆಡೆ ವಿದ್ಯಾರ್ಥಿಗಳು ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಕೈಗೊಳ್ಳುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ.

ವಸತಿ ಶಾಲೆಯಲ್ಲಿಯೇ 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಸೇಡಂ ತಾಲೂಕಿನಲ್ಲಿರುವ ಇಂದಿರಾ ಗಾಂಧಿ ಬಾಲಕರ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ.

13 ವರ್ಷದ ನಾರಾಯಣ ಪಾಳಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಕೊಠಡಿಯ ಫ್ಯಾನ್ ಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಮುಧೋಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button