ಶಿಕ್ಷಣ

ಶಾಲೆಯಲ್ಲಿ ಚೆಸ್ ಆಟ ನೋಡುತ್ತಾ ಕುಳಿತಿದ್ದ 10ನೇ ತರಗತಿ ವಿದ್ಯಾರ್ಥಿ ಏಕಾಏಕಿ ಕುಸಿದು ಬಿದ್ದು ಸಾವು 

Views: 23

ಕನ್ನಡ ಕರಾವಳಿ ಸುದ್ದಿ: ಶಿವಮೊಗ್ಗ:ತಾಲೂಕಿನ ತಮ್ಮಡಿಹಳ್ಳಿ ಹೈಸ್ಕೂಲ್ ನಲ್ಲಿ  ಸಹಪಾಠಿಗಳು ಚೆಸ್ ಆಡುತ್ತಿದ್ದುದನ್ನು ನೋಡುತ್ತಾ ಕುಳಿತಿದ್ದ 10ನೇ ತರಗತಿ ವಿದ್ಯಾರ್ಥಿಯೊಬ್ಬ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾನೆ.ಕುಟುಂಬಸ್ಥರು ಆಘಾತಕ್ಕೊಳಗಾಗಿದ್ದರು.

ವಿನಯ್ ಮೂಲತಃ ಶಿಕಾರಿಪುರದವನಾಗಿದ್ದು, ವಿದ್ಯಾಭ್ಯಾಸಕ್ಕಾಗಿ ತಮ್ಮಡಿಹಳ್ಳಿಯ ಮಾವನ ಮನೆಯಲ್ಲಿದ್ದನು. ಓದಿನಲ್ಲಿ ತೊಡಗಿಸಿಕೊಂಡಿದ್ದ ವಿದ್ಯಾರ್ಥಿ ಶಾಲೆಯಲ್ಲಿ ಸಾಮಾನ್ಯವಾಗಿಯೇ ಇದ್ದ ಎನ್ನಲಾಗಿದ್ದು, ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವುದು ಕುಟುಂಬಸ್ಥರಲ್ಲಿ ಆತಂಕ ಮೂಡಿಸಿದೆ.

ಮಗನ ಸಾವಿನ ಸುದ್ದಿ ತಿಳಿದು ಮೆಗ್ಗಾನ್ ಆಸ್ಪತ್ರೆಗೆ ಧಾವಿಸಿದ ತಂದೆ-ತಾಯಿ ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರ ದುಃಖ ಮುಗಿಲು ಮುಟ್ಟಿದೆ. ಈ ಬಗ್ಗೆ ಕುಂಸಿ ಪೊಲೀಸ್ ಠಾಣೆ  ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!