ಶಿಕ್ಷಣ

ಶಾಲೆಯಲ್ಲಿ ದುಷ್ಕರ್ಮಿಗಳ ಗುಂಡಿನ ದಾಳಿ ವಿದ್ಯಾರ್ಥಿಗಳು ಸೇರಿ 11 ಜನರು ಬಲಿ

Views: 141

ಕನ್ನಡ ಕರಾವಳಿ ಸುದ್ದಿ: ಶಾಲೆಯೊಂದರಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು ಏಕಾಏಕಿ ಗುಂಡಿನ ದಾಳಿ ಮ್ನಡೆಸಿದ ಪರಿಣಾಮ 11 ಜನರು ಸಾವನ್ನಪ್ಪಿದ್ದಾರೆ.

ಆಸ್ಟ್ರಿಯಾದ ಗ್ರಾಜ್ ಶಾಲೆಯಲ್ಲಿ ಈ ಘಟನೆ ನಡೆದಿದೆ. ಗ್ರಾಜ್ ಶಾಲೆಯ ಎರಡು ಕೊಠಡಿಗಳಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ವಿದ್ಯಾರ್ಥಿಗಳು ಸೇರಿ 11 ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ನಡುವೆ ಗುಂಡಿನ ದಾಳಿ ನಡೆಸಿದ ಓರ್ವ ದುಷ್ಕರ್ಮಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

Related Articles

Back to top button