ಶಿಕ್ಷಣ

ಶಾಲೆಯಲ್ಲಿ ನೀರು ಕುಡಿಯಲು ಹೋದ ವಿದ್ಯಾರ್ಥಿನಿ ವಿದ್ಯುತ್‌ ಸ್ಪರ್ಶದಿಂದ ಸಾವು 

Views: 59

ಕನ್ನಡ ಕರಾವಳಿ ಸುದ್ದಿ: ನೀರು ಕುಡಿಯಲು ಹೋದ ವಿದ್ಯಾರ್ಥಿನಿ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕುರುಕುಂದಾ ಗ್ರಾಮದಲ್ಲಿ ಶುಕ್ರವಾರ(ಜ.30) ನಡೆದಿದೆ.

ಶಾಲೆಯ ಸಿಬ್ಬಂದಿಯ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಆಕ್ರೋಶ ವ್ಯಕ್ತವಾಗಿದೆ.

ತನುಶ್ರೀ(11) ಮೃತಪಟ್ಟ 5ನೇ ತರಗತಿಯ ವಿದ್ಯಾರ್ಥಿನಿ. ಗ್ರಾಮದ ಹರಿಜನ ವಾರ್ಡ್‌ನಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ನಿನ್ನೆ ಮಧ್ಯಾಹ್ನ ಊಟದ ಸಮಯದಲ್ಲಿ ಶಾಲೆಯ ಆವರಣದಲ್ಲಿದ್ದ ಕುಡಿಯುವ ನೀರಿನ ಶುದ್ದೀಕರಣ ಘಟಕದಲ್ಲಿ ನೀರು ಕುಡಿಯಲು ಹೋದಾಗ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಈ ಘಟನೆಗೆ ಅಧಿಕಾರಿಗಳು ಮತ್ತು ಶಾಲಾ ಮಂಡಳಿಯ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರು ಹಾಗೂ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.

Related Articles

Back to top button
error: Content is protected !!