ರಾಜಕೀಯ

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ: ಎಫ್‌ಐಆರ್‌ 

Views: 74

ಕನ್ನಡ ಕರಾವಳಿ ಸುದ್ದಿ: ಬೆಂಗಳೂರು ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಅತ್ಯಾಚಾರ ಕೇಸ್‌ ದಾಖಲಾಗಿದೆ.

ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತೆಯೊಬ್ಬರು ನೀಡಿದ ದೂರಿನ ಮೇರೆಗೆ ಶಾಸಕ ಮುನಿರತ್ನ ಮತ್ತು ಬೆಂಬಲಿಗರ ವಿರುದ್ಧ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಶಾಸಕ ಮುನಿರತ್ನ, ಬೆಂಬಲಿಗರಾದ ವಸಂತ, ಚನ್ನಕೇಶವ, ಕಮಲ್ ಹಾಗೂ ಒಬ್ಬ ಅಪರಿಚಿತನ ವಿರುದ್ಧ ಕೇಸ್ ದಾಖಲಾಗಿದೆ.

2013ರಲ್ಲಿ ಜೆಪಿ ಪಾರ್ಕ್‌ನ ಶಾಸಕರ ಕಚೇರಿಯಲ್ಲಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಅಪರಿಚಿತ ವ್ಯಕ್ತಿಯಿಂದ ಇಂಜೆಕ್ಷನ್ ತರಿಸಿ ಇಂಜೆಕ್ಟ್ ಮಾಡಿಸಿದ್ದರೆಂದು ದೂರಿನಲ್ಲಿ ಆರೋಪಿಸಲಾಗಿದೆ.

ಅತ್ಯಾಚಾರಕ್ಕೂ ಮುನ್ನ ನೀಡಿದ ಇಂಜೆಕ್ಷನ್ನಿಂದ ಈಗ ನನಗೆ ಇಡಿಆರ್ ಎಂಬ ಕಾಯಿಲೆ ಬಂದಿದೆ. ಇದರಿಂದ ಮನನೊಂದು ನಾನು ಆತ್ಮಹತ್ಯೆಗೆ ಯತ್ನಿಸಿದ್ದೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಬಿಜೆಪಿ ಕಾರ್ಯಕರ್ತೆ ನೀಡಿದ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 376D, 270, 323, 354, 504, 506, 509, 34 ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಏನಿದು ಆರೋಪ ?

‘ಈ ಹಿಂದೆ ಬಿಜೆಪಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದೆ. ನನ್ನ ಗಂಡ ಬಿಟ್ಟು ಹೋದ ಬಳಿಕ 2ನೇ ಮದುವೆ ಆಗಿ ಜೀವನ ನಡೆಸುತ್ತಿದ್ದೆ. ವೇಶ್ಯಾವಾಟಿಕೆ ಆರೋಪ ಹೊರಿಸಿ ನನ್ನನ್ನು ಜೈಲಿಗೆ ಕಳಿಸಿದ್ದರು. ಬಳಿಕ ಜಾಮೀನು ಪಡೆದು ಹೊರಗೆ ಬಂದಿದ್ದೆ. ಕೆಲವರು ನನ್ನ ಕೇಸ್ ಇತ್ಯರ್ಥ ಮಾಡಿಕೊಡುವುದಾಗಿ ಆಮಿಷವೊಡ್ಡಿ ನನ್ನನ್ನು ಕಚೇರಿಗೆ ಕರೆಸಿ ಸಾಮೂಹಿಕ ಅತ್ಯಾಚಾರವೆಸಗಿದರು ಎಂದು ಮಹಿಳೆ ಆರೋಪ ಮಾಡಿದ್ದಾರೆ.

Related Articles

Back to top button
error: Content is protected !!