ಶಿಕ್ಷಕನ ಕಿರುಕುಳ ತಾಳಲಾರದೆ ಬೆಂಕಿ ಹಚ್ಚಿಕೊಂಡ ವಿದ್ಯಾರ್ಥಿನಿ

Views: 198
ಕನ್ನಡ ಕರಾವಳಿ ಸುದ್ದಿ: ಶಿಕ್ಷಕನ ಕಿರುಕುಳಕ್ಕೆ ಬೇಸತ್ತು ಮನನೊಂದ ವಿದ್ಯಾರ್ಥಿನಿಯೊಬ್ಬಳು ಕಾಲೇಜು ಆವರಣದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದ್ದು, ಇಡೀ ಒಡಿಶಾ ರಾಜ್ಯವನ್ನೇ ಬೆಚ್ಚಿಬೀಳಿಸಿದೆ.
ಬಾಲ್ಸೂರ್ನಲ್ಲಿರುವ ಫಕೀರ್ ಮೋಹನ್ ಕಾಲೇಜಿನ ಬಿ.ಎಡ್ ವಿದ್ಯಾರ್ಥಿನಿಗೆ ಶಿಕ್ಷಕ ಕಿರುಕುಳ ನೀಡಿದ್ದಾನೆ. ಲೈಂಗಿಕವಾಗಿ ಸಹಕರಿಸುವಂತೆ ವಿಭಾಗದ HOD ದೌರ್ಜನ್ಯ ನೀಡಿದ್ದಾರೆ. ಸಹಕರಿಸದೇ ಇದ್ದರೇ ನಿನ್ನ ಭವಿಷ್ಯ ಹಾಳು ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ವಿದ್ಯಾರ್ಥಿನಿ ಜುಲೈ 1ರಂದು ಕಾಲೇಜು ಆಡಳಿತಕ್ಕೆ ದೂರು ನೀಡಿದ್ದಾರೆ. ದೂರು ಕೊಟ್ಟು ವಾರ ಕಳೆದರೂ ಶಿಕ್ಷಕನ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಕ್ಕೆ ಬೇಸತ್ತಿದ್ದ ವಿದ್ಯಾರ್ಥಿನಿ, ಕಾಲೇಜು ಅವರಣದಲ್ಲೇ ಬೆಂಕಿ ಹೆಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಬೆಂಕಿ ಹಚ್ಚಿಕೊಂಡ ವಿದ್ಯಾರ್ಥಿನಿ ನೋವಿನಿಂದ ಕಿರುಚುತ್ತಾ ಓಡಲು ಪ್ರಾರಂಭಿಸಿದ್ದಾಳೆ. ಬೆಂಕಿಯಿಂದ ನರಾಳುಡುತ್ತಿದ್ದ ವಿದ್ಯಾರ್ಥಿನಿಯನ್ನು ಮತ್ತೊಬ್ಬ ವಿದ್ಯಾರ್ಥಿ ರಕ್ಷಿಸಲು ಓಡಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾನೆ. ಆದರೆ ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ, ಆತನಿಗೂ ಕೂಡ ಸುಟ್ಟು ಗಾಯಾಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.
ಘಟನೆ ಸಂಬಂಧ ವಿಭಾಗದ ಮುಖಸ್ಥ ಸಮೀರ್ ಕುಮಾರ್ ಸಾಹುಕಾರರನ್ನು ಬಂಧಿಸಲಾಗಿದೆ. ವಿದ್ಯಾರ್ಥಿನಿಯ ದೂರನ್ನು ಸಮಯಕ್ಕೆ ಸರಿಯಾಗಿ ಗಂಭೀರವಾಗಿ ಪರಿಗಣಿಸಿದ್ದರೆ, ಇಷ್ಟು ದೊಡ್ಡ ಘಟನೆ ನಡೆಯುತ್ತಿರಲಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ.