ಶಿಕ್ಷಕರ ಜೊತೆ ಈಜಲು ತೆರಳಿದ್ದ ವಿದ್ಯಾರ್ಥಿ ನೀರಲ್ಲಿ ಮುಳುಗಿ ಸಾವು
Views: 35
ಕನ್ನಡ ಕರಾವಳಿ ಸುದ್ದಿ: ಶಿಕ್ಷಕರ ಜೊತೆ ಈಜಲು ಹೋಗಿದ್ದ ವಿಟ್ಲದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ರ್ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅನಿಕೇತ್ (14) ಮೃತಪಟ್ಟ ದುರ್ದೈವಿ. ಅನಿಕೇಶ್ ವಿಟ್ಲ ಮೂಲದವನಾಗಿದ್ದು, ಕೊಪ್ಪ ಜಯಪುರದಲ್ಲಿ ವ್ಯಾಸಂಗ ಮಾಡುತ್ತಿದ್ದ. ಭಾನುವಾರ(ಎ.12) ಮಧ್ಯಾಹ್ನ ಶಿಕ್ಷಕರೊಂದಿಗೆ ಈಜುಕೊಳಕ್ಕೆ ಈಜಲು ತೆರಳಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.
ಈಜಾಡುತ್ತಿದ್ದ ವೇಳೆ ಅನಿಕೇತ್ ನೀರಿನಲ್ಲಿ ಮುಳುಗಿ ತೀವ್ರ ಅಸ್ವಸ್ಥಗೊಂಡಿದ್ದ. ತಕ್ಷಣವೇ ಆತನನ್ನು ನೀರಿನಿಂದ ಮೇಲೆತ್ತಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ.
ಮೃತ ಅನಿಕೇತ್ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಕಾಶಿಮಠ ನಿವಾಸಿ, ಗೋವರ್ಧನ್ ನಾಯಕ್‌ರ ಪುತ್ರ. ಗೋವರ್ಧನ್ ನಾಯಕ್ ಜೀವವಿಮಾ ಪ್ರತಿನಿಧಿಯಾಗಿದ್ದು,ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಜೀವವಿಮಾ ನಿಗಮದ ಕಚೇರಿಯನ್ನು ಹೊಂದಿದ್ದಾರೆ. ಹಿಂದೂ ಸಂಘಟನೆಗಳು ಸೇರಿದಂತೆ ಹಲವಾರು ಧಾರ್ಮಿಕ ಹಾಗೂ ಸಮಾಜಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಮಗನ ಅಕಾಲಿಕ ಮರಣದಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಈ ಘಟನೆಗೆ ಸಂಬಂಧಿಸಿದಂತೆ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.






