ಇತರೆ

ಶಿಕ್ಷಕಿ ಮೇಲೆ ವಿದ್ಯಾರ್ಥಿಗಳು ಸಾಮೂಹಿಕ ಹಲ್ಲೆ: ವಿಡಿಯೋ ವೈರಲ್.. ಸಾರ್ವಜನಿಕರ ತೀವ್ರ ಆಕ್ರೋಶ

Views: 102

ಕನ್ನಡ ಕರಾವಳಿ ಸುದ್ದಿ: ಶಿಕ್ಷಕಿಯೊಬ್ಬರ ಮೇಲೆ ವಿದ್ಯಾರ್ಥಿಗಳು ಸಾಮೂಹಿಕವಾಗಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಮಾಲ್ಡಾ ಜಿಲ್ಲೆಯ ಬಮನ್‌ಗೋಲಾ ವ್ಯಾಪ್ತಿಯ ಜಗದಾಲಾ ಹೈಸ್ಕೂಲ್‌ನಲ್ಲಿ ಈ ಘಟನೆ ನಡೆದಿದೆ. ಶಾಲಾ ದಾಖಲೆಗಳಿಗೆ ವಿರುದ್ಧವಾಗಿ ಪ್ರಮಾಣಪತ್ರವೊಂದರಲ್ಲಿ ಹೆಸರು ಬದಲಾಯಿಸಿಕೊಡುವಂತೆ ಕೆಲ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದರು. ಇದಕ್ಕೆ ನಿಯಮಾವಳಿಗಳ ಪ್ರಕಾರ ಸಾಧ್ಯವಿಲ್ಲವೆಂದು ಶಿಕ್ಷಕಿ ನಿರಾಕರಿಸಿದ್ದಾರೆ. ಇದರಿಂದ ಕೆರಳಿದ ವಿದ್ಯಾರ್ಥಿಗಳು ನೇರವಾಗಿ ಸ್ಟಾಫ್‌ರೂಮ್‌ಗೆ ನುಗ್ಗಿ, ಶಿಕ್ಷಕಿ ಸೇರಿದಂತೆ ಇತರ ಶಾಲಾ ಸಿಬ್ಬಂದಿಯ ಮೇಲೆ ದೌರ್ಜನ್ಯ ನಡೆಸಿ ಹಲ್ಲೆ ಮಾಡಿದ್ದಾರೆ.

ದಾಳಿಯಲ್ಲಿ ಗಾಯಗೊಂಡ ಶಿಕ್ಷಕಿಯನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆಸ್ಪತ್ರೆಯ ಆವರಣದಲ್ಲೂ ಉಭಯ ಬಣಗಳ ನಡುವೆ ಮತ್ತೆ ಮಾತಿನ ಚಕಮಕಿ ಹಾಗೂ ಗಲಾಟೆ ನಡೆದು ಕೆಲಕಾಲ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.

ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

Related Articles

Back to top button
error: Content is protected !!