ಇತರೆ

ಶಿರಾಡಿಯಲ್ಲಿ ಕುಸಿದ ಗುಡ್ಡ, ಮಣ್ಣಿನಡಿಯಲ್ಲಿ ಸಿಲುಕಿದ ಓಮ್ನಿ ಕಾರು!

Views: 202

ಹಾಸನ: ನಿರಂತರ ಸುರಿಯುತ್ತಿರುವ ಮಳೆಯ ಆರ್ಭಟ ಅಂಕೋಲಾದ ಶಿರೂರು ಬಳಿ ಗುಡ್ಡ ಕುಸಿದ ಬೆನ್ನಲ್ಲೇ ಶಿರಾಡಿ ಘಾಟ್ ರಸ್ತೆಯಲ್ಲಿ ಇಂತಹದೇ ದುರ್ಘಟನೆ ನಡೆದಿದೆ. ಏಕಾಏಕಿ ಮಣ್ಣು ಗುಡ್ಡ ಕುಸಿದಿದೆ. ಪರಿಣಾಮ ಮಾರುತಿ ಓಮಿನಿ ಕಾರು ಮಣ್ಣಿನಲ್ಲಿ ಸಿಲುಕಿಕೊಂಡಿದೆ.

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಘಟನೆ ನಡೆದಿದೆ. ಸಕಲೇಶಪುರ ತಾಲ್ಲೂಕಿನ, ಎತ್ತಿನಹಳ್ಳ ಬಳಿ ಮಳೆಯ ಅಬ್ಬರದಿಂದ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮಣ್ಣು ಕುಸಿದಿದೆ. ಪರಿಣಾಮ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ

ಓಮ್ನಿ ಕಾರು ಮಣ್ಣಿನಡಿ ಸಿಲುಕಿದೆ. ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಕಂದಾಯ ಇಲಾಖೆ ಸಿಬ್ಬಂದಿ ಮಣ್ಣು ತೆರವುಗೊಳಿಸುವ ಕಾರ್ಯ ಮಾಡುತ್ತಿದ್ದಾರೆ.

Related Articles

Back to top button
error: Content is protected !!