ಜನಮನ

ಶಿರಾಡಿ ಘಾಟಿಯಲ್ಲಿ ರಸ್ತೆ ಅವಘಡ: ಅಪಘಾತ ಎಸಗಿದ ವಾಹನ ಪರಾರಿ,ಒಡಿಶಾ ಮೂಲದ ಇಬ್ಬರು ದುರ್ಮರಣ

Views: 0

ಹಾಸನ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯ ಗಡಿ ದೇವಸ್ಥಾನದ ಬಳಿ ಮಿನಿ ಲಾರಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಒಡಿಶಾ ಮೂಲದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಒಡಿಶಾದ ಅಮೂಲ್ಯ ಪೆರಿಡಾ (23) ಮತ್ತು ಸಾಂತಿರ್ನಿಶ್‌ ಜೂಟಿ (27) ಮೃತಪಟ್ಟವರು. ಹಾಸನದಿಂದ ಮಂಗಳೂರಿಗೆ ಸರಕು ಸಾಗಿಸುತ್ತಿದ್ದ ಮಿನಿ ಲಾರಿಗೆ ಗಡಿ ದೇವಸ್ಥಾನದ ಮೇಲ್ಭಾಗದಲ್ಲಿನ ಕೆಂಪುಹೊಳೆ ಬಳಿ ಯಾವುದೋ ವಾಹನ ಢಿಕ್ಕಿ ಹೊಡೆದು ಪರಾರಿಯಾಗಿದೆ. ಮಿನಿ ಲಾರಿ ಸಂಪೂರ್ಣ ಜಖಂಗೊಂಡಿದೆ. ಅದರೆಡೆಯಲ್ಲಿ ಸಿಲುಕಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತ ಎಸಗಿದ ವಾಹನವನ್ನು ಚಾಲಕ ನಿಲ್ಲಿಸದೆ ಪರಾರಿಯಾಗಿದ್ದು, ಆ ವಾಹನದ ಸುಳಿವು ಸಿಕ್ಕಿಲ್ಲ. ಸಕಲೇಶಪುರ ಗ್ರಾಮಾಂತರ ಠಾಣೆಯ ಪೋಲಿಸರು ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related Articles

Back to top button
error: Content is protected !!