ಶಿಕ್ಷಣ
ಶಿರೂರು:ಜ್ಞಾನದಾ ಶಿಕ್ಷಣ ಸಂಸ್ಥೆಯಲ್ಲಿ “ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನ ” ಆಚರಣೆ
"ವ್ಯಸನ ಮುಕ್ತರಾಗಿ ಸದ್ಗುಣ ಸಚ್ಚಾರಿತ್ರ್ಯ ಜೀವನದಲ್ಲಿ ಅಳವಡಿಸಿಕೊಂಡಾಗ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ರೂಪುಗೊಳ್ಳಲು ಸಾಧ್ಯ."

Views: 53
ಕನ್ನಡ ಕರಾವಳಿ ಸುದ್ದಿ: ಶಿರೂರು ಜ್ಞಾನದಾ ಶೈಕ್ಷಣಿಕ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನ ಪ್ರಯುಕ್ತ *ನಶಾ ಮುಕ್ತ ಭಾರತ್* ಅಭಿಯಾನದಡಿ ಎಲ್ಲರೂ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಅಮಲು ಭರಿಸುವ ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯ ಅನೇಕ ದೈಹಿಕ ಹಾಗೂ ಮಾನಸಿಕ ಕಾಯಿಲೆಗಳಿಗೆ ಒಳಗಾಗಿ ತನ್ನ ಜೀವವನ್ನು ಕಳೆದುಕೊಳ್ಳುತ್ತಿದ್ದಾನೆ ಮುಂದಿನ ಭಾವಿ ಪ್ರಜೆಗಳಾದ ನೀವೆಲ್ಲರೂ ಸದ್ಗುಣ, ಸಚ್ಚಾರಿತ್ರ್ಯ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ದುಶ್ಚಟಗಳಿಂದ ದೂರವಿದ್ದು ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಪಾತ್ರ ವಹಿಸಿ ಓದಿನ ಕಡೆಗೆ ಹೆಚ್ಚಿನ ಆಸಕ್ತಿ ತೋರಬೇಕು ಆಗ ಮಾತ್ರ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ರೂಪುಗೊಳ್ಳಲು ಸಾಧ್ಯ ಎಂದು ಸಂಸ್ಥೆಯ ಪ್ರಾಂಶುಪಾಲರಾದ ಡಾI ರವಿದಾಸ್ ಶೆಟ್ಟಿ ವಿದ್ಯಾರ್ಥಿಗಳಿಗೆ ತಿಳಿವಳಿಕೆ ನೀಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.