ಕರಾವಳಿ
ಶಿರೂರು ಗುಡ್ಡ ಕುಸಿತದಲ್ಲಿ ಕಣ್ಮರೆಯಾಗಿದ್ದ ಬಾಲಕಿಯ ಶವ ಸಮುದ್ರ ತೀರದಲ್ಲಿ ಪತ್ತೆ

Views: 217
ಉತ್ತರ ಕನ್ನಡ: ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತದಲ್ಲಿ ಕಣ್ಮರೆಯಾಗಿದ್ದ ಬಾಲಕಿ ಅವಂತಿಕಾಳ (6)ಮೃತದೇಹ ಪತ್ತೆಯಾಗಿದೆ.
ಜುಲೈ 16 ರಂದು ನಡೆದ ಗುಡ್ಡ ಕುಸಿತದಲ್ಲಿ ಒಂದೇ ಕುಟುಂಬದ ಐವರು ಕಣ್ಮರೆಯಾಗಿದ್ದರು. ಐವರ ಪೈಕಿ ಮೂವರ ಮೃತದೇಹ ಪತ್ತೆಯಾಗಿತ್ತು. ಲಕ್ಷ್ಮಣ ನಾಯ್ಕ, ಪತ್ನಿ ಶಾಂತಿ ನಾಯ್ಕ, ಮಗ ರೋಶನ್ ನಾಯ್ಕ ಮೃತದೇಹ ಪತ್ತೆಯಾಗಿತ್ತು. ಇದೀಗ ಬಾಲಕಿ ಅವಂತಿಕಾ ಮೃತದೇಹ ಕೂಡ ಪತ್ತೆಯಾಗಿದೆ.
ಕುಮಟಾ ತಾಲೂಕಿನ ಗಂಗೆಕೊಳ್ಳದ ಸಮುದ್ರ ತೀರದಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಮೃತದೇಹವನ್ನು ಗೋಕರ್ಣದ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ.