ಕರಾವಳಿ

ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಲಾರಿಕೊನೆಗೂ ಪತ್ತೆ ;ಚಾಲಕನಿಗಾಗಿ ಶೋಧ!

Views: 341

ಉತ್ತರ ಕನ್ನಡ: ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಲಾರಿ ಕೊನೆಗೂ ಪತ್ತೆಯಾಗಿದೆ. ಕಳೆದ ಜುಲೈ 16ರಂದು ಉತ್ತರ ಕನ್ನಡ ಜಿಲ್ಲೆಯ ಶಿರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಸಂಭವಿಸಿತ್ತು. ಗುಡ್ಡ ಕುಸಿತದ ಸ್ಥಳದಲ್ಲಿ 7 ಮಂದಿ ಮೃತದೇಹ ಪತ್ತೆಯಾಗಿದೆ, ಲಾರಿಯ ಸುಳಿವೇ ಸಿಕ್ಕಿರಲಿಲ್ಲ. ಹೀಗಾಗಿ ನಿರಂತರ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಇಂದು ನದಿಯಲ್ಲಿ ಲಾರಿ ಬಿದ್ದಿರುವುದು ಪತ್ತೆಯಾಗಿದೆ.

ಗುಡ್ಡದ ಮಣ್ಣಿನಲ್ಲಿ ಕಾಣೆಯಾಗಿದ್ದ ಲಾರಿ ಹಾಗೂ ಚಾಲಕನಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಇಂದು ಕಾರ್ಯಾಚರಣೆ ವೇಳೆ ಕಬ್ಬಿಣ ತಾಗಿದ ಅನುಭವ ಆಗಿದ್ದು, ಸಿಬ್ಬಂದಿಗಳು ಇಲ್ಲಿ ಲಾರಿ ಇದೆ ಎಂದು ತಿಳಿಸಿದ್ದಾರೆ.

ಶಿರೂರಿನಲ್ಲಿ ಪೋಕ್ಲೈನ್‌ನಲ್ಲಿ ಕಾರ್ಯಾಚರಣೆ ಮಾಡುವಾಗ ಲಾರಿ ಪತ್ತೆಯಾಗಿದೆ. ಲಾರಿ ಪತ್ತೆಯಾದ ಹಿನ್ನೆಲೆಯಲ್ಲಿ ಬೋಟ್‌ನಲ್ಲಿ ಸ್ಥಳಕ್ಕೆ ಬೇಟಿ ನೀಡಿದರು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ, ಕಾರವಾರ ಶಾಸಕ ಸತೀಶ್ ಸೈಲ್ ಅವರು ಸಹ ಬೋಟ್‌ನಲ್ಲಿ ಸ್ಥಳಕ್ಕೆ ಹೋಗಿ ಮಾಹಿತಿಯನ್ನು ಖಚಿತಪಡಿಸಿದ್ದಾರೆ.

ಕೇರಳ ಮೂಲದ ಭಾರತ್ ಬೆಂಜ್‌ ಲಾರಿ ಗುಡ್ಡ ಕುಸಿತದಲ್ಲಿ ಸಿಲುಕಿತ್ತು. ಅರ್ಜುನ್ ಎನ್ನುವ ಚಾಲಕ ಇನ್ನೂ ಸಹ ನಾಪತ್ತೆಯಾಗಿದ್ದಾನೆ. ಸದ್ಯ ಮಳೆ‌ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆಗೆ ತೊಡಕು ಉಂಟಾಗಿದೆ.

 

 

Related Articles

Back to top button