ಕರಾವಳಿ

ಶಿರೂರು ಗುಡ್ಡ ಕುಸಿತ ಬೆನ್ನಲ್ಲೇ ಇಂದು ಬೆಳ್ಳಂಬೆಳಗ್ಗೆ ಗೋಕರ್ಣದಲ್ಲಿ ಗುಡ್ಡ ಕುಸಿತ

Views: 152

ಉತ್ತರ ಕನ್ನಡ :ಜಿಲ್ಲೆಯಲ್ಲಿ ಮಳೆಯ ಅಬ್ಬರದಿಂದಾಗಿ ಶಿರೂರು ಗುಡ್ಡ ಕುಸಿತ ಬೆನ್ನಲ್ಲೇ ಇಂದು ಬೆಳ್ಳಂಬೆಳಗ್ಗೆ ಗೋಕರ್ಣದಲ್ಲಿ ಗುಡ್ಡ ಕುಸಿತಗೊಂಡಿದೆ.

ಗೋಕರ್ಣ ಬಳಿಯ ರಾಮತೀರ್ಥ ದೇವಸ್ಥಾನದ ಹಿಂಬಾಗದ ಬಳಿ ಗುಡ್ಡ ಕುಸಿತ ಸಂಭವಿಸಿದೆ. ಬೆಳಗಿನ ಜಾವ ಗುಡ್ಡ ಕುಸಿದಿದ್ದರಿಂದ ಭಾರೀ ಅನಾಹುತ ಒಂದು ತಪ್ಪಿದೆ. ಅದೃಷ್ಟವಶಾತ್ ದೇವಸ್ಥಾನದಲ್ಲಿ ಯಾರೂ ಇಲ್ಲದ ಹಿನ್ನೆಲೆ ಅನಾಹುತ ತಪ್ಪಿದೆ. ನಿನ್ನೆ ಗುಡ್ಡ ಕುಸಿತದಿಂದ 7ಕ್ಕೂ ಹೆಚ್ಚು ಜನರ ಸಾವನ್ನಪ್ಪಿದ್ದಾರೆ. ಇಂತಹ ಸಂದರ್ಭದಲ್ಲಿ ಗುಡ್ಡ ಕುಸಿತ ಮುಂದುವರೆದ ಹಿನ್ನೆಲೆ ಆತಂಕ ಹೆಚ್ಚಿಸಿದೆ. ಸಾವಿನ ಸಂಖ್ಯೆ 12ಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Related Articles

Back to top button
error: Content is protected !!