ಇತರೆ

ಶಿರೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ದಿನೇಶ್ ಕುಮಾರ್ ನಿಧನ

Views: 38

ಕನ್ನಡ ಕರಾವಳಿ ಸುದ್ದಿ: ಬೈಂದೂರು ತಾಲೂಕಿನ ಶಿರೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ದಿನೇಶ್ ಕುಮಾರ್ ಶಿರೂರು (46) ಅವರು ಸೋಮವಾರ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಅವರು ಶಿರೂರು ಗ್ರಾಮ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಈ ಹಿಂದೆ ಅವರು ಆಕ್ರಮ ಸಕ್ರಮ ಸಮಿತಿ ಮಾಜಿ ಸದಸ್ಯರಾಗಿ, ಸ.ಪ.ಪೂ ಕಾಲೇಜಿನ ಶಾಲಾಭಿವೃದ್ಧಿ ಸಮಿತಿ ಸದಸ್ಯರಾಗಿ, ಮೇಲ್ಪಂಕ್ತಿ ಎರಗೇಶ್ವರ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಸಕ್ರೀಯ ಸ್ವಯಂಸೇವಕರಾಗಿದ್ದ ಅವರು ಬಿಜೆಪಿ ಪಕ್ಷದಲ್ಲಿಯೂ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು.

ಅವರು ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದು ಸೋಮವಾರ ನಿಧನರಾಗಿದ್ದಾರೆ. ಅವಿವಾಹಿತರಾಗಿರುವ ಅವರು ತಾಯಿ ಹಾಗೂ ಇಬ್ಬರು ಸಹೋದರಿಯರು ಹಾಗೂ ಅಪಾರ ಸ್ನೇಹಿತ ವರ್ಗವನ್ನು ಅಗಲಿದ್ದಾರೆ.

Related Articles

Back to top button
error: Content is protected !!