ಶಿರೂರು ಜ್ಞಾನದಾ ಶಿಕ್ಷಣ ಸಂಸ್ಥೆಯಲ್ಲಿ ವೈದ್ಯ ದಿನಾಚರಣೆ

Views: 258
ಕನ್ನಡ ಕರಾವಳಿ ಸುದ್ದಿ: ವೈದ್ಯೋ ನಾರಾಯಣೋ ಹರಿ ಎಂಬ ಉಕ್ತಿಯಂತೆ ವೈದ್ಯರಾದವರು ದೇವರಿಗೆ ಸಮಾನರಾದವರು ಅವರು ರೋಗಿಯ ರೋಗವನ್ನು ಪರಿಹರಿಸುವವರು, ವೈದ್ಯ ಕೇವಲ ರೋಗ ಪರಿಹಾರಕರಾಗಿರದೇ ರೋಗಿಯ ಸಹ ಚಿಂತಕರೂ ಆಗಿರುತ್ತಾರೆ ಅದಕ್ಕಾಗಿ ವೈದ್ಯರನ್ನು ದೇವರಿಗೆ ಹೋಲಿಸುತ್ತಾರೆ ರೋಗಕ್ಕೆ ತುತ್ತಾದ ಪ್ರತಿಯೊಬ್ಬರನ್ನು ಸರಿಯಾದ ಚಿಕಿತ್ಸೆ ನೀಡುವ ಮೂಲಕ ಗುಣಪಡಿಸಿ ಅವರಿಗೆ ಪುನರ್ಜನ್ಮ ನೀಡುವುದು ವೈದ್ಯರ ಕಾಯಕವಾದರೆ ಅವರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ನಾಗರೀಕರ ಕರ್ತವ್ಯವಾಗಿದೆ ಹಾಗಾಗಿ ವೈದ್ಯರಿಗೆ ವಿಶೇಷ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಜುಲೈ ಒಂದರಂದು ಭಾರತದಲ್ಲಿ ರಾಷ್ಟ್ರೀಯ ವೈದ್ಯರ ದಿನವನ್ನಾಗಿ ಆಚರಿಸಲಾಗುತ್ತದೆ ಈ ನಿಟ್ಟಿನಲ್ಲಿ ಬೈಂದೂರು ತಾಲೂಕಿನ ಶಿರೂರು ಗ್ರಾಮದಲ್ಲಿ ಕಳೆದ ಹಲವಾರು ವರ್ಷಗಳಿಂದ ವೈದ್ಯರಾಗಿ ಸೇವೆ ಸಲ್ಲಿಸಿ, ಎಲ್ಲರಿಗೂ ಚಿರಪರಿಚಿತರಾಗಿರುವ ಡಾI ಕೆ ಪಿ ನಂಬಿಯಾರ್ ರವರ ಸೇವೆಯನ್ನು ಗುರುತಿಸಿ ಗೌರವಿಸಲಾಯಿತು ಪ್ರಾಂಶುಪಾಲ ಡಾI ರವಿದಾಸ್ ಶೆಟ್ಟಿ,ವಿದ್ಯಾರ್ಥಿ ನಾಯಕಿ ಹಾಗೂ ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.