ಶಿರೂರು ಜ್ಞಾನದಾ ಶೈಕ್ಷಣಿಕ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ
Views: 307
ಕನ್ನಡ ಕರಾವಳಿ ಸುದ್ದಿ: ಶಿರೂರಿನ ಜ್ಞಾನದಾ ಶೈಕ್ಷಣಿಕ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭ ಇತ್ತೀಚಿಗೆ ನಡೆಯಿತು
ಖಂಬದಕೋಣೆ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪಪ್ರಾಂಶುಪಾಲರಾದ ಉಮೇಶ್ ರಾಯ್ಕರ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಾ ಕ್ರೀಡೆಯಲ್ಲಿ ಶಿಸ್ತು ಬಹಳ ಮುಖ್ಯ,ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ ಕೇವಲ ಕ್ರೀಡಾಕೂಟದ ದಿನದಂದು ಮಾತ್ರ ಕ್ರೀಡೆಯಲ್ಲಿ ತೊಡಗಿಸಿಕೊಳ್ಳದೆ ನಿರಂತರ ಕಠಿಣ ಅಭ್ಯಾಸದಿಂದ ಆರೋಗ್ಯವಂತರಾಗಿರಲು ಸಾಧ್ಯ ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿ ಕ್ರೀಡಾಸ್ಪೂರ್ತಿಯಿಂದ ಭಾಗವಹಿಸಿ ಎಂದರು.
ರಾಷ್ಟ್ರಮಟ್ಟದ ಪ್ರೊ ಕಬಡ್ಡಿ ತಂಡದ ಆಟಗಾರ ನಾಗರಾಜ್ ಸಿದ್ದಿ ಕ್ರೀಡಾಕೂಟಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ ಎಲ್ಲರಿಗೂ ಶುಭ ಕೋರಿದರು ಜ್ಞಾನದಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ರಾಮಚಂದ್ರ ಬಿ ಶಿರೂರ್ಕರ್ ಧ್ವಜಾರೋಹಣ ಗೈದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿಿ, ಶಿಕ್ಷಣದ ಜೊತೆಗೆ ಕ್ರೀಡೆಯಲ್ಲಿಯೂ ಭಾಗವಹಿಸಿ ಸದಾ ಕ್ರಿಯಾಶೀಲರಾಗಿ ರಾಷ್ಟ್ರ ಮತ್ತು ರಾಜ್ಯಮಟ್ಟದ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಲಭ್ಯವಿರುವ ಉತ್ತಮ ಅವಕಾಶಗಳ ಪ್ರಯೋಜನ ಪಡೆದು ಸಂಸ್ಥೆಯ ಹೆಸರನ್ನು ಉತ್ತುಂಗಕ್ಕೇರಿಸಬೇಕೆಂದು ಕರೆ ಕೊಟ್ಟರು.
ಪ್ರಾಂಶುಪಾಲರಾದ ಡಾ. ರವಿದಾಸ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿನಿ ಐಶ್ವರ್ಯ ಕ್ರೀಡಾ ಪ್ರತಿಜ್ಞಾವಿಧಿ ನೆರವೇರಿಸಿದರು.
ಎಮರಾಲ್ಡ್, ಟೋಪಾಜ್, ಸಪಾಯರ್ ಮತ್ತು ರೂಬಿ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು
ಸಂಸ್ಥೆಯ ಖಜಾಂಚಿ ಚಂಪಾ ಆರ್ ಶಿರೂರ್ಕರ್, ವಿದ್ಯಾರ್ಥಿ ನಾಯಕಿ ವೈಷ್ಣವಿ, ಕ್ರೀಡಾಮಂತ್ರಿ ಪನ್ನಗ, ದೈಹಿಕ ಶಿಕ್ಷಣ ಶಿಕ್ಷಕ ಮಂಜುನಾಥ್ ನಾಯ್ಕ್ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವೃಂದ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಗಳಾದ ಕುಮಾರಿ ಅಂಜಲಿ ಸ್ವಾಗತಿಸಿ, ಕುಮಾರಿ ವೈಷ್ಣವಿ ಜಿ ಮತ್ತು ಸೃಷ್ಟಿ ಕಾರ್ಯಕ್ರಮ ನಿರೂಪಿಸಿ ಹಾಗೂ ಕುಮಾರಿ ಸಿಂಧೂರ ವಂದಿಸಿದರು.
ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಾಯಿತು.














